ಬೆಂಗಳೂರು:
ಆಂಧ್ರ ಪ್ರದೇಶದ ತಿರುಪತಿಯಿಂದ ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆಯೊಬ್ಬರು ಅವರ ಮನೆಯಲ್ಲಿ ಸ್ನಾನಕ್ಕೆ ಹೋಗಿದ್ದ ವೇಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ.
ಆಂಧ್ರದ ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ ಲಕ್ಷ್ಮೀ,ಸೋಮವಾರ ಸ್ನಾನಕ್ಕೆ ಹೋಗಿದ್ದಾಗ ವೇಳೆ ಬಾತ್ರೂಮ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ಆಂಧ್ರಪ್ರದೇಶದ ತಿರುಪತಿ ಮೂಲದ ಲಕ್ಷ್ಮೀ ತನ್ನ ಪತಿಯೊಂದಿಗೆ ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅಡೇಪೇಟೆಯಲ್ಲಿರುವ ಸಂಬಂಧಿ ಸುಹಾಸಿನಿ ಅವರ ಮನೆಗೆ ಪತಿ ಜೊತೆ ಹೋಗಿದ್ದು, ಬೆಳಗ್ಗೆ ಸ್ನಾನ್ಕಕೆಂದು ಹೋದಾಗ ಆಲ್ಲೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ಮನೆಯಲ್ಲಿಯೇ ಎಲ್ಲರೂ ಇದ್ದರು. ಸ್ನಾನಕ್ಕೆ ಹೋಗುವ ಮುನ್ನ ಲಕ್ಷ್ಮೀ ಮುಖದ ಮೇಲೆ ಏನೂ ಆಗಿರಲಿಲ್ಲ. ಯಾವುದೇ ಗಾಯದ ಗುರುತುಗಳೂ ಇರಲಿಲ್ಲ. ಆದರೆ, ಸ್ನಾನಕ್ಕೆ ಹೋದ ಕೆಲವೇ ನಿಮಿಷಗಳಲ್ಲಿ ಸಾವನ್ನಪಿದ್ದು, ಮುಖದಲ್ಲಿ ಪರಚಿರುವ ಗಾಯಗಳಾಗಿರುವುದು ಕಂಡುಬಂದಿದೆ. ಮನೆಗೆ ಯಾರೂ ಬಂದಿರಲಿಲ್ಲ, ಬಾತ್ರೂಮ್ನಲ್ಲಿ ಗ್ಯಾಸ್ ಗೀಸರ್ ಸಹ ಆನ್ ಆಗಿರಲಿಲ್ಲ. ಬಕೆಟ್‌ನಲ್ಲಿ ನೀರು ಸಹ ತುಂಬಿಸಿರಲಿಲ್ಲ, ಆದರೂ ಮಹಿಳೆ ಸ್ನಾನಗೃಹದಲ್ಲಿ ಬೆತ್ತಲೆಯಾಗಿ ಬಿದ್ದಿದ್ದಾರೆ.ಅಲ್ಲದೆ ಅವರ ಮುಖದ ಮೇಲೆ ಪರಚಿದ ಗುರುತುಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ಸಾವು ನೆಲಮಂಗಲ ಟೌನ್ ಪೊಲೀಸರಿಗೆ ತಲೆನೋವಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಟೌನ್ ಪೊಲೀಸರು, ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ