Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಪೋಟಕ್ಕೆ ಬೆಚ್ಚಿದ ಬೆಂಗಳೂರು
    ರಾಜ್ಯ

    ಸ್ಪೋಟಕ್ಕೆ ಬೆಚ್ಚಿದ ಬೆಂಗಳೂರು

    vartha chakraBy vartha chakraಆಗಷ್ಟ್ 16, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.15- ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿ 12 ಮಂದಿ ಗಾಯಗೊಂಡಿರುವ ಆತಂಕಕಾರಿ ಘಟನೆ ಆಡುಗೋಡಿಯ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ.
    ಗಂಭೀರ ಗಾಯಗೊಂಡಿದ್ದ ಮುಬಾರಕ್(8) ಮೃತ ಬಾಲಕನಾಗಿದ್ದಾನೆ,
    ಗಾಯಗೊಂಡಿರುವ ಕಸ್ತೂರಮ್ಮ(35), ಸರಸಮ್ಮ(50), ಶಬೀರನಾ ಬಾನು(35), ಸುಬ್ರಮಣಿ(62), ಶೇಖ್ ನಜೀದ್ ಉಲ್ಲಾ(37), 8 ವರ್ಷದ ಬಾಲಕಿ ಫಾತಿಮಾ ಸೇರಿ 12 ಮಂದಿಯನ್ನು ಸಂಜಯ್​ಗಾಂಧಿ ಮತ್ತು ಜಯನಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ನಾಲ್ವರು ಸ್ಥಿತಿ ಚಿಂತಾಜನಕವಾಗಿದೆ.
    ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಮನೆಯ ಗೋಡೆ ಮತ್ತು ಛಾವಣಿ ಕುಸಿದು ಬಿದ್ದಿದೆ. ಮೊದಲ ಮಹಡಿಯ ಮನೆಯು ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಎಂಟಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
    ಗಾಯಾಳು ಕಸ್ತೂರಿಯ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಕಸ್ತೂರಿಗೆ 8 ವರ್ಷದ ಕಯಾಲ್ ಎಂಬ ಹೆಣ್ಣು ಮಗುವಿದೆ. ವಿಕ್ಟೋರಿಯಾ ಬರ್ನಿಂಗ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮುಬಾರಕ್ ಬಾಲಕನ ಪಕ್ಕದ ಮನೆಯಲ್ಲಿ ಕಸ್ತೂರಿ ವಾಸವಿದ್ದರು.
    ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿರುವ ಆಡುಗೋಡಿ ಠಾಣೆ ಪೊಲೀಸರು ಮೇಲ್ನೋಟಕ್ಕೆ ಸಿಲಿಂಡರ್ ಸ್ಟೋಟ ಸಂಭವಿಸಿರಬಹುದು ಎನ್ನತ್ತಿದ್ದಾರೆ.
    ಇದೇ ನಗರದ ಸಾಕಷ್ಟು ಜನರು ಬೆಳಗ್ಗೆಯೇ ಲಾಲ್​ ಬಾಗ್​ನಲ್ಲಿ ಕೆಲಸಕ್ಕೆ ಹೋಗುತ್ತಾರೆ. ಒಂದು ವೇಳೆ ಇಂದು ಕೆಲಸಕ್ಕೆ ಹೋಗದೆ ಇದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಸಿಲಿಂಡರ್ ಬ್ಲಾಸ್ಟ್ ಆಗಿರುವ ಸಾಧ್ಯತೆ ಕಡಿಮೆ ಅಂತ ಸ್ಥಳಿಯರು ಹೇಳುತ್ತಿದ್ದು, ತುಂಬಾ ದೊಡ್ಡ ಬ್ಲಾಸ್ಟ್ ಆಗಿದೆ. ಕೆಲವರ ಕೈ ಮತ್ತು ತಲೆ ಹೋಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಫೋಟಗೊಂಡಿರುವ ಮನೆ ಸುತ್ತ ಮುತ್ತಲಿನ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.
    ಸಿಲಿಂಡರ್ ಸ್ಪೋಟವಾಗಿರುವ ಸಾಧ್ಯತೆ ಕಡಿಮೆ. ತುಂಬಾ ದೊಡ್ಡ ಸ್ಪೋಟವಾಗಿದೆ. ಕೆಲವರ ಕೈ ಮತ್ತು ತಲೆ ಹೋಗಿದೆ.ಇದೇ ನಗರದ ಅನೇಕ ಜನರು ಲಾಲ್ ಬಾಗ್‌ನಲ್ಲಿ ಕೆಲಸ ಮಾಡುತ್ತಾರೆ. ಒಂದು ವೇಳೆ ಇಂದು ಕೆಲಸಕ್ಕೆ ಹೋಗದೆ ಇದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು ಎಂದು ಸ್ಥಳೀಯರೊಬ್ಬರು ಹೇಳಿದರು.
    ಆತಂಕಕ್ಕೊಳಗಾಗಿರುವ ಜನರು ನಾನು ಕೆಳಗಡೆ ಮಲಗಿದ್ದೆ. ಎಂಟು ಕಾಲಿಗೆ ದೊಡ್ಡ ಸೌಂಡ್‌ ಬಂತು ಕಲ್ಲುಗಳು ಬಿದ್ದವು. ಸ್ಫೋಟಗೊಂಡ ಮನೆಗೆ ನಮಗೆ ನಾಲ್ಕಡಿ ದೂರ ಇದೆ. ಬೀರು, ಶೀಟು ಎಲ್ಲವೂ ಬ್ಲಾಸ್ಟ್‌ಗೆ ಮೇಲೋಗಿದೆ. ಮೂರು ಸಲ ಬ್ಲಾಸ್ಟ್‌ ಆದ ಶಬ್ಧ ಕೇಳಿಸಿತು. ಕೈಕಾಲು ಆಡ್ತಾನೆ ಇಲ್ಲ. ಏನಾಗಿದೆ ಎಂದೆ ತಿಳಿಯುತ್ತಿಲ್ಲ ಎಂದು ಸ್ಥಳೀಯರು ಭಯಭೀತರಾಗಿದ್ದಾರೆ

    ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ಕಾಂಗ್ರೆಸ್ಸಿಗರಿಗೆ ಕೊಟ್ಟ ಕರೆ
    Next Article ಮಲಗಿದ್ದಲ್ಲೇ ಸುಟ್ಟು ಕರಕಲಾದರು
    vartha chakra
    • Website

    Related Posts

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Scotthem ರಲ್ಲಿ ಸುಧಾ ಮೂರ್ತಿ ಹೆಸರಲ್ಲಿ ವಂಚಿಸಿದ ಅರ್ಚಕ | Sudha Murthy
    • beste online casinos mit echtgeld ರಲ್ಲಿ ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    • Kings Casino Öffnungszeiten ರಲ್ಲಿ ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe