ಬೆಂಗಳೂರು,ಸೆ.14:
ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಳ, ಹಾಗೂ ಹಾಲು ಖರೀದಿದರ ಹೆಚ್ಚಳ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಇದೀಗ ಹಾಲು ಮಾರಾಟ ದರ ಹೆಚ್ಚಳಕ್ಕೆ ತೀರ್ಮಾನಿಸಿದೆ.
ರಾಜ್ಯದ ಎಲ್ಲಾ ಹಾಲು ಒಕ್ಕೂಟಗಳು ಪ್ರತಿ ಲೀಟರ್ ಹಾಲು, ಮಾರಾಟ ದರ ಸರಾಸರಿ ಐದು ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದು ಸರ್ಕಾರ ಸರಾಸರಿ ಮೂರರಿಂದ ನಾಲ್ಕು ರೂಪಾಯಿ ದರ ಹೆಚ್ಚಳಕ್ಕೆ ಚಿಂತನೆ ನಡೆಸಿದೆ.
ಕಳೆದ ಕೆಲವು ತಿಂಗಳ ಹಿಂದೆ ಹಾಲಿನ ಪ್ರಮಾಣ ಹೆಚ್ಚಳ ಮಾಡಿ ಪ್ರತಿ ಪ್ಯಾಕೇಟಿಗೆ ಎರಡು ರೂಪಾಯಿ ದರ ಹೆಚ್ಚಿಸಲಾಗಿತ್ತು. ಆದರೆ ಈಗ ಪ್ಯಾಕೆಟ್ ಗಳ ಪ್ರಮಾಣವನ್ನು ಅರ್ಧ ಲೀಟರ್ ಗೆ ಇಳಿಸಿ ದರ ಅಷ್ಟೇ ಉಳಿಸಿಕೊಳ್ಳಲು ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ, ರಾಜ್ಯದ ರೈತರಿಗೆ ಈಗಾಗಲೇ ಪ್ರತಿ ಲೀಟರ್ ಹಾಲಿಗೆ 31ರೂ.ಗಳಿಗೆ ನೀಡಲಾಗುತ್ತಿದೆ ಹಾಗೂ ಗ್ರಾಹಕರಿಗೆ ಒಂದು ಲೀಟರ್ಗೆ 41ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಹೀಗಿರುವಾಗ ದರ ಪರಿಷ್ಕರಿಸುವ ಸಂಬಂಧ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
Previous Articleಸಿದ್ದರಾಮಯ್ಯ ಯಾರ ಜಾಗದಲ್ಲಿ ಮನೆ ಕಟ್ಟಿದ್ದಾರೆ.
Next Article ಶಾಸಕ ಮುನಿರತ್ನ ಬಂಧನ