Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಡುಗಿಯರ ಮಾತು ಕೇಳಿದ ಟೆಕ್ಕಿಗಳ ಗತಿ ನೋಡಿ !
    ಸುದ್ದಿ

    ಹುಡುಗಿಯರ ಮಾತು ಕೇಳಿದ ಟೆಕ್ಕಿಗಳ ಗತಿ ನೋಡಿ !

    vartha chakraBy vartha chakraಆಗಷ್ಟ್ 6, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.6-
    ಐಟಿ ಸಿಟಿ ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್ ಗಳು ಸೈಬ‌ರ್ ಖದೀಮರಿಂದ ಲಕ್ಷಾಂತರ ರೂಗಳ ವಂಚನೆಗೊಳಗಾಗಿದ್ದಾರೆ,ಓರ್ವ ಕಾಲ್ ಗರ್ಲ್ ಸೇವೆಯ ಆಮಿಷಕ್ಕೆ 1.49 ಲಕ್ಷ  ಕಳೆದುಕೊಂಡರೆ, ಇನ್ನೊಬ್ಬರು ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ವಧುವಿನಂತೆ ಬಿಂಬಿಸಿದ ವಂಚಕರಿಗೆ 55.64 ಲಕ್ಷ ರೂ ಹಣವನ್ನು ಕಳೆದುಕೊಂಡಿದ್ದಾರೆ
    ಇವೆರಡೂ ಪ್ರಕರಣಗಳನ್ನು ಹೈಗೌಂಡ್ಸ್ ಪೊಲೀಸರು ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
    24 ವರ್ಷದ ಸಾಫ್ಟ್‌ವೇ‌ರ್ ಎಂಜಿನಿಯರ್, ಕಾಲ್ ಗರ್ಲ್ ಸೇವೆ ಬೇಕೆಂದು ಮೆಸೇಜಿಂಗ್ ಆ್ಯಪ್ ಟೆಲಿಗ್ರಾಮ್‌ನಲ್ಲಿ ಬಂದಿದ್ದ ಲಿಂಕ್ ಕ್ಲಿಕ್ ಮಾಡಿದಾಗ ಇಶಾನಿ ರೆಡ್ಡಿ ಎಂಬುವವರ ಪರಿಚಯವಾಗಿತ್ತು. ಆಕೆ ಕಾಲ್ ಗರ್ಲ್ ಮತ್ತು ಸ್ಪಾ ಸೇವೆಗಳನ್ನು ಒದಗಿಸುವುದಾಗಿ ಹೇಳಿದ್ದಳು. ಮೊದಲು 299 ರೂ. ಪಾವತಿಗೆ ಸೂಚಿಸಿದ್ದ ಆಕೆ, ನಂತರ ವಿವಿಧ ಸೇವಾ ಶುಲ್ಕಗಳ ಹೆಸರಿನಲ್ಲಿ ಹೆಚ್ಚಿನ ಹಣವನ್ನು ಪೀಕಿದ್ದಳು.
    ಸಾಫ್ಟ್‌ವೇರ್ ಇಂಜಿನಿಯರ್  1,49,052 ರೂ.ಗಳನ್ನು ಆಕೆಗೆ ವರ್ಗಾಯಿಸಿದ್ದಾರೆ. ಆ ಬಳಿಕ ಹೆಚ್ಚಿನ ಮೊತ್ತವಾಯಿತೆಂದು ಸೇವೆಯನ್ನು ಕ್ಯಾನ್ಸ್‌ಲ್ ಮಾಡಿ ಹಣ ವಾಪಾಸ್‌ ಮಾಡುವಂತೆ ಹೇಳಿದ್ದಾರೆ. ಪಾವತಿ ಮಾಡಿದ್ದ ಮೊತ್ತವನ್ನು ರಿಫಂಡ್ ಮಾಡುವಂತೆ ಕೇಳಿದ್ದಾರೆ. ಆದರೆ, ಆ ಕಡೆಯಿಂದ ಉತ್ತರವೇ ಬಂದಿಲ್ಲ.
    ಕೂಡಲೇ ರಾಷ್ಟ್ರೀಯ ಸೈಬ‌ರ್ ಅಪರಾಧ ಪೋರ್ಟಲ್‌ನಲ್ಲಿ ಈ ವಿಷಯದ ಬಗ್ಗೆ ವರದಿ ಮಾಡಿ ಹೈಗೌಂಡ್ಸ್ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
    55.64 ಲಕ್ಷ ವಂಚನೆ:
    ಉಲ್ಲಾಳ ಉಪನಗರದ 32 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್  ರೊಬ್ಬರು ಒಕ್ಕಲಿಗ ವೈವಾಹಿಕ ವೇದಿಕೆಯಲ್ಲಿ ನಿಹಾರಿಕಾ ಗೌಡ ಎಂಬ ಪ್ರೊಪೈಲ್ ಮ್ಯಾಚ್ ಮಾಡಿದ್ದರು. ಇಬ್ಬರೂ ಚಾಟ್ ಮೂಲಕ ಸಂಬಂಧ ಬೆಳೆಸಿದ್ದು, ಆಕೆ ಮದುವೆಯ ಭರವಸೆ ನೀಡಿದ್ದಳು.
    ನಂತರ, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಲು ಒತ್ತಾಯಿಸಿ, ಲಾಭದಾಯಕತೆಯ ಬಗ್ಗೆ ವಿವರಿಸಿದ್ದಳು. ನಕಲಿ ವೆಬ್‌ಸೈಟ್‌ನ ಲಿಂಕ್ ಕಳುಹಿಸಿ, ವ್ಯಾಲೆಟ್ ರಚಿಸಲು ಮಾರ್ಗದರ್ಶನ ನೀಡಿದ್ದಳು. ಆಕೆಯ ಮಾತನ್ನು ನಂಬಿ ಟೆಕ್ಕಿ ಮೊದಲು 1 ಲಕ್ಷ ರೂ. ಹೂಡಿಕೆ ಮಾಡಿದ್ದರು. ನಂತರ ಹೆಚ್ಚಿನ ಆಸೆಗೆ 55.64 ಲಕ್ಷ ರೂ.ಗಳನ್ನು ವರ್ಗಾಯಿಸಿದ್ದಾರೆ. ಆದರೆ ಹಣ ವಾಪಾಸ್ ಬಂದಿಲ್ಲ. ನಂತರ ಅವರು ಸೈಬರ್ ಪೊಲೀಸರಿಗೆ ದೂರು ನೀಡಿದ್ದು ತನಿಖೆ ನಡೆಯುತ್ತಿದೆ

    ಬೆಂಗಳೂರು ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಜಾಂಡೀಸ್ ಗೆ ಬಲಿಯಾದ ಯುವ ನಟ !
    Next Article ಇಂಧನ ಮಂತ್ರಿ ಕೆ ಜೆ ಜಾರ್ಜ್ ಅವರಿಗೆ ಬಿಗ್ ರಿಲೀಫ್ !
    vartha chakra
    • Website

    Related Posts

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಡಿಸೆಂಬರ್ 16, 2025

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    ಡಿಸೆಂಬರ್ 16, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಕಸ್ತೂರಿ ರಂಗನ್ ವರದಿ ತಿರಸ್ಕಾರ

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casimba ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • kazinoukrainy ರಲ್ಲಿ ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ
    • WaldoQueep ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಡಿಸೆಂಬರ್ 16, 2025

    ಕಸ್ತೂರಿ ರಂಗನ್ ವರದಿ ತಿರಸ್ಕಾರ

    ಡಿಸೆಂಬರ್ 16, 2025

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    ಡಿಸೆಂಬರ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಜಕಾರಣಿಗಳ ಅಚ್ಚುಮೆಚ್ಚಿನ ಜ್ಯೋತಿಷಿಗಳು ಯಾರು ಗೊತ್ತಾ #varthachakra #astrologyposts #indianpoliticians
    Subscribe