ಮಂಡ್ಯ,ಏ.26-
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿದಿದೆ.ಅದೃಷ್ಟವಶಾತ್ 25 ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ
ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ ಬೆಂಗಳೂರು ಕಡೆಗೆ ಖಾಸಗಿ ಬಸ್ ಮುಂಜಾನೆ ಚಲಿಸುತ್ತಿತ್ತು ಇದು ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ಇದ್ದಕ್ಕಿದ್ದಂತೆ ಬಸ್‌ನಲ್ಲಿ ಬೆಂಕಿ ಕಾಣಿಸಿದೆ. ಕೂಡಲೇ ಬಸ್ ಚಾಲಕ ಬಸ್‌ನಲ್ಲಿ ಇದ್ದ 25 ಮಂದಿ ಪ್ರಯಾಣಿಕರನ್ನು ತಮ್ಮ ಲೆಗೇಜ್ ಸಹಿತ ಕೆಳಗೆ ಇಳಿಯಲು ಹೇಳಿದ್ದಾನೆ. ಬಳಿಕ ಎಲ್ಲಾ ಪ್ರಯಾಣಿಕರು ಬಸ್‌ನಿಂದ ಕೆಳಗೆ ಇಳಿಸಿದಿದ್ದಾರೆ.
ಬಳಿಕ ಬಸ್‌ನಲ್ಲಿ ಬೆಂಕಿಯ ಪ್ರಮಾಣ ಹೆಚ್ಚಿದ್ದು, ನೋಡ ನೋಡುತ್ತಿದ್ದಂತೆ ಬಸ್ ಧಗಧಗನೇ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಸ್‌ನ ಬೆಂಕಿಯನ್ನು ಹಾರಿಸಿದ್ದಾರೆ. ಸದ್ಯ ಬಸ್‌ನಲ್ಲಿ ಹೇಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿಲ್ಲ. ಬಿಂಡಿಗನವಿಲೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ನಡೆದಿದೆ.
Previous Articleಪಾಕಿಸ್ತಾನೀಯರಿಗಾಗಿ ರಾಜ್ಯದಲ್ಲಿ ಹುಡುಕಾಟ
Next Article ಜನಿವಾರ ತೆಗೆದಿದ್ದಕ್ಕೆ ಪಿಐಎಲ್
