ಬೆಂಗಳೂರು, ಸೆ.10,:
ತೈಲ ಬಳಕೆಯಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮ ತಡೆಗಟ್ಟಲು ರೂಪಿಸಿರುವ ಇ.ವಿ.ಬಳಕೆಗೆ ರಾಜ್ಯ ಸರ್ಕಾರ ಸಾಕಷ್ಟು ಉತ್ತೇಜನ ನೀಡುತ್ತಿದೆ.ಆದರೆ ಇವಿ ಚಾರ್ಜಿಂಗ್ ವಿಷಯ ಮಾತ್ರ ಇವಿ ಬಳಕೆದಾರರ ಕಿರಿಕಿರಿ ಗೆ ಕಾರಣವಾಗಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಬೆಸ್ಕಾಂ ಇದೀಗ ತನ್ನ ಚಾರ್ಜಿಂಗ್ ಘಟಕಗಳಿಗೆ ಹೊಸ ರೂಪ ನೀಡಲು ಮುಂದಾಗಿದೆ.
ಇದರ ಮೊದಲ ಹಂತವಾಗಿ ಇವಿ ಬಳಕೆದಾರರಿಗೆ ಸುಗಮ ಚಾರ್ಜಿಂಗ್ ಸೌಲಭ್ಯ ಒದಗಿಸುತ್ತಿರುವ ಬೆಸ್ಕಾಂನ ‘ಇವಿ ಮಿತ್ರ’ ಆ್ಯಪ್ ಈಗ ಹೊಸ ರೂಪ ಪಡೆದುಕೊಂಡಿದೆ.
ಆ್ಯಂಡ್ರಾಯ್ಡ್ ಮತ್ತು ಐಓಎಸ್ ಎರಡು ಮೊಬೈಲ್ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಹೊಸ ‘ಇವಿ ಮಿತ್ರ’ ಆ್ಯಪ್- ಬಳಕೆದಾರರ ಪ್ರೊಫೈಲ್ ನಿರ್ವಹಣೆ, ಚಾರ್ಚಿಂಗ್ ಸ್ಟೇಷನ್‌ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್ ಪ್ರಕ್ರಿಯೆ, ಬುಕ್ಕಿಂಗ್ ವಿವರ, ಚಾರ್ಚಿಂಗ್ ಸ್ಟೇಷನ್‌ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್ ಕಾಯ್ದಿರಿಸುವ ಸೌಲಭ್ಯ ಹೊಂದಿದೆ.
ಹಳೆ ‘ಇವಿ ಮಿತ್ರ’ ಆ್ಯಪ್ ಡಿಲೀಟ್ ಮಾಡಿ,https://onelink.to/evmithra ಮೂಲಕ ಹೊಸ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. ವ್ಯಾಲೆಟ್‌ನಲ್ಲಿ ಹಣ ಉಳಿದಿದ್ದರೂ ಚಿಂತಿಸಬೇಕಿಲ್ಲ. ಹೊಸ ಆ್ಯಪ್‌ಗೆ ಹಣ ವರ್ಗಾವಣೆಯಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ.
ಕನ್ನಡ, ಹಿಂದಿ, ಇಂಗ್ಲಿಷ್ ಸೇರಿದಂತೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ಇವಿ ಚಾರ್ಚಿಂಗ್ ಮಾಹಿತಿ ಲಭ್ಯವಿದ್ದು, ಹಣ ಪಾವತಿಗೆ ಹಲವು ಆಯ್ಕೆಗಳನ್ನು ಒಳಗೊಂಡಿದೆ. ರಿಟೇಲ್ ಬಳಕೆದಾರರ ಶುಲ್ಕದ ವಿವರ, ಬಿಲ್ಲಿಂಗ್, ಪ್ರೊಫೈಲ್ ಇರಲಿದೆ.
ಆ್ಯಪ್ ಡೌನ್‌ಲೋಡ್ ಮಾಡಿಕೊಂಡ ನಂತರ ಫೋನ್ ನಂಬರ್ ನಮೂದಿಸಿ, ಲಾಗಿನ್ ಆಗಿ. ನಿಮ್ಮ ಮೊಬೈಲ್‌ಗೆ ಬರುವ ಓಟಿಪಿ ಸಂಖ್ಯೆ ದಾಖಲಿಸಿದ ನಂತರ ನಿಮ್ಮ ಲಾಗಿನ್ ಖಾತ್ರಿಯಾಗುವುದು. ಖಾಸಗಿ ಹಾಗೂ ವಾಣಿಜ್ಯ ಬಳಕೆದಾರರು ಈ ಒಂದೇ ಆ್ಯಪ್ ಮೂಲಕ ಚಾರ್ಚಿಂಗ್ ಸೌಲಭ್ಯ ಪಡೆಯಬಹುದಾಗಿದೆ. ಎಸಿ/ಡಿಸಿ ಚಾರ್ಚರ್ ಅಥವಾ ಮ್ಯಾಪ್ ಮೂಲಕ ಇವಿ ಬಳಕೆದಾರರು ಚಾರ್ಚಿಂಗ್ ಸ್ಟೇಷನ್ ಇರುವ ಜಾಗದ ಮಾಹಿತಿ ಪಡೆಯಬಹುದು.