ಬೆಂಗಳೂರು:ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಮನಸೋ ಇಚ್ಛೆ ಥಳಿಸಿ ಭೀಕರವಾಗಿ ಕೊಲೆ ಮಾಡಿರುವ ದುರ್ಘಟನೆ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ.
ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ನರಸಿಂಹರಾಜು (32) ನನ್ನು ಮಹಿಳೆಯ ಸಂಬಂಧಿಕರು ಕೊಲೆಮಾಡಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಶನಿವಾರ ಮಹಿಳೆಯು ನರಸಿಂಹರಾಜು ಮನೆಗೆ ಬಂದಿದ್ದಳು. ಅದು ಮಹಿಳೆಯ ಸಂಬಂಧಿಕರಿಗೆ ಗೊತ್ತಾಗಿತ್ತು. ತಕ್ಷಣವೇ ನರಸಿಂಹರಾಜು ಮನೆಗೆ ಬಂದ ನಾಲ್ಕೈದು ಮಂದಿ ಆತನನ್ನು ಹೊರಗೆ ಎಳೆದುಕೊಂಡು ಹೋಗಿ ರಸ್ತೆಯುದ್ದಕ್ಕೂ ಹಲ್ಲೆ ನಡೆಸಿ ಮನಸೋ ಇಚ್ಛೆ ಥಳಿಸಿದ್ದಾರೆ. ಮಧ್ಯ ಪ್ರವೇಶಿಸಿ ತಡೆಯಲು ಬಂದ ನರಸಿಂಹರಾಜು ತಾಯಿಯ ಮೇಲೂ ಹಲ್ಲೆ ನಡೆಸಿದ್ದಾರೆ.
ಹಲ್ಲೆಗೊಳಗಾಗಿ ತೀವ್ರ ರಕ್ತಸ್ರಾವದಿಂದ ಗಂಭೀರವಾಗಿ ಅಸ್ವಸ್ಥನಾದ ನರಸಿಂಹರಾಜುವನ್ನು ತಕ್ಷಣವೇ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ.
ನರಸಿಂಹರಾಜು ಸಾವಿಗೆ ಮಹಿಳೆ ಹಾಗೂ ಆಕೆಯ ಕುಟುಂಬಸ್ಥರು ಕಾರಣ ಎಂದು ಆತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದರೂ ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ. ಇದು ನರಸಿಂಹರಾಜು ಕುಟುಂಬಸ್ಥರ ಆಕ್ಷೇಪಕ್ಕೆ ಕಾರಣವಾಗಿದೆ. ಪೊಲೀಸರು ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದು, ವರದಿ ಆಧರಿಸಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ವಿಭಾಗದ ಡಿಸಿಪಿ ನ್ಯಾಮಗೌಡ ತಿಳಿಸಿದ್ದಾರೆ.


1 ಟಿಪ್ಪಣಿ
bet mgm $200 betmgm-play betmgm WV