ಬೆಂಗಳೂರು : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ಪ್ರವಾಸದಲ್ಲಿದ್ದು, ಪ್ರತಿನಿತ್ಯ ರಾಜ್ಯದ ಆಗು-ಹೋಗುಗಳ ಬಗ್ಗೆ ಪ್ರತಿಕ್ರಿಯಿಸುತ್ತಿರುವುದು ಎಲ್ಲರಿಗೂ ಗೊತ್ತಿದೆ. ಆದರೆ ಅಧಿಕಾರಿಗಳ ತಂಡವೊಂದಕ್ಕೆ ಮಾತ್ರ ಯಡಿಯೂರಪ್ಪ ಎಲ್ಲಿದ್ದಾರೆಂದು ಗೊತ್ತಿಲ್ಲವಂತೆ ಹಾಗೆಯೇ ಅವರು ದೂರವಾಣಿ ಕರೆಗೂ ಸಿಗುತ್ತಿಲ್ಲವಂತೆ ಇದೇನಿದು ಅಂತಿರಾ..ಇದು ಸತ್ಯ.
ಕಳೆದ 2012ರಲ್ಲಿ ನಡೆದ ಭೂಮಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಪ್ರಕರಣದ ವಿಚಾರಣೆಯನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸುತ್ತಿದೆ
ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13 (1) (ಡಿ) ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಯಡಿಯೂರಪ್ಪ ಎರಡನೆ ಆರೋಪಿಯಾಗಿದ್ದು ಏಪ್ರಿಲ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಲು ಸೂಚಿಸಿದೆ. ಅದರಂತೆ ಏಪ್ರಿಲ್ 8, 13 ಮತ್ತು 16ನೇ ತಾರೀಖಿನಂದು ತಾವು ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ್ದೆವು, ಆದರೆ ಯಡಿಯೂರಪ್ಪ ಅವರು ರಾಜ್ಯ ಪ್ರವಾಸದಲ್ಲಿರುವ ಕಾರಣ ಸಮನ್ಸ್ ನೀಡಲು ಸಾಧ್ಯವಾಗಲಿಲ್ಲ ಎಂದು ಕೋರ್ಟ್ ಗೆ ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿ ಗಮನಿಸಬೇಕಾದ ಸಂಗತಿಯೆಂದರೆ, ತಮಗೆ ಜಾರಿಯಾಗಿರುವ ಸಮನ್ಸ್ ರದ್ದು ಕೋರಿ ಯಡಿಯೂರಪ್ಪ ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದ್ದಾರೆ. ತಮ್ಮ ವಿರುದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಎಲ್ಲ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡುವಂತೆ ಹಾಗೂ ಆ ಪ್ರಕರಣವನ್ನು ರದ್ದು ಮಾಡುವಂತೆ ಕೋರಿದ್ದಾರೆ.ಈ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ಇನ್ನೂ ವಿಚಾರಣೆಗೆ ಬರಬೇಕಿದೆ.ಈ ನಡುವೆ ಜಾರಿಯಾಗಿರುವ ಸಮನ್ಸ್ ಯಡಿಯೂರಪ್ಪ ಅವರನ್ನು ತಲುಪಿಲ್ಲ