ಬೆಂಗಳೂರು: ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಬೆಂಗಳೂರಿನ ಹನುಮಂತನಗರದಲ್ಲಿರುವ ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಭೇಟಿ ನೀಡಿದ್ದರು. ಈ ವೇಳೆ ಕ್ಯಾಂಟೀನ್ ಗೆ ಬಂದ ಗ್ರಾಹಕರಿಗೆ ಉಪಚರಿಸಿ ಗ್ರಾಹಕರಿಗೆ ಊಟ ಬಡಿಸಿದರು. ಕ್ಯಾಂಟೀನ್ ನಲ್ಲಿ ಕೇಕ್ ಕತ್ತರಿಸಿ ದೇವೇಗೌಡರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಮಧ್ಯಾಹ್ನದ ಭೋಜನವಾಗಿ ರಾಗಿಮುದ್ದೆಯನ್ನು ಅಪ್ಪಾಜಿ ಕ್ಯಾಂಟೀನ್ ನಲ್ಲಿಯೇ ನಿಖಿಲ್ ಸವಿದರು. ಬಳಿಕ ಕ್ಯಾಂಟೀನ್ ಸಿಬ್ಬಂದಿಗಳ ಜೊತೆ ಕೆಲಹೊತ್ತು ನಿಖಿಲ್ ಕುಮಾರಸ್ವಾಮಿ ಕಾಲ ಕಳೆದರು. ದೇವೇಗೌಡರ ವಿಚಾರಗಳನ್ನ ಅರ್ಥ ಮಾಡಿಕೊಂಡು ಕಳೆದ 5 ವರ್ಷಗಳಿಂದ ಬೆಂಗಳೂರಿನಲ್ಲಿ ಕಡಿಮೆ ಹಣಕ್ಕೆ ಊಟ ವಿತರಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಆಟೋ ಚಾಲಕರು, ಕಾರ್ಮಿಕರು ಬದುಕು ಸಾಗಿಸುವುದೇ ಕಷ್ಟವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು 10 ರೂಪಾಯಿಗೆ ರಾಜ್ಯ ಜೆಡಿಎಸ್ ವಕ್ತಾರರಾದ ಟಿ.ಎ. ಶರವಣ ಅವರು ಅನ್ನದಾಸೋಹ ನಡೆಸುತ್ತಿದ್ದಾರೆ. ಇದು ಹೀಗೆಯೇ ನಿರಂತರವಾಗಿ ಮುಂದುವರೆಯಲಿ ಎಂದು ಹೇಳಿದ್ದಾರೆ. ಈ ವೇಳೆ ವಿಧಾನ ಪರಿಷತ್ ಮಾಜಿ ಶಾಸಕರು ಹಾಗು ರಾಜ್ಯ ಜೆಡಿಎಸ್ ವಕ್ತಾರರಾದ ಟಿ.ಎ. ಶರವಣ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಾಜರಿದ್ದರು. ಇಂದು ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಅಪ್ಪಾಜಿ ಕ್ಯಾಂಟೀನ್ ನಲ್ಲಿ 1 ರೂಪಾಯಿಗೆ ಊಟ ವಿತರಿಸಲಾಗುತ್ತಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
