ಅಮರಾವತಿ(ಆಂಧ್ರಪ್ರದೇಶ),ಸೆ.18-ರಾಜ್ಯದ ವಿವಿಧ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಹಿಂಸಾಚಾರ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಪ್ರಚೋದಿಸುವ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ ಐ) ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಮನೆಯೊಂದರ ಮೇಲೆಯೂ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು,ನಾಳೆ ಹೈದರಾಬಾದ್‌ನಲ್ಲಿರುವ ಎನ್‌ಐಎ ಕಚೇರಿಗೆ ಹಾಜರಾಗುವಂತೆ ವ್ಯಕ್ತಿಯೊಬ್ಬರಿಗೆ ನೋಟಿಸ್ ನೀಡಿದ್ದಾರೆ.
ಎನ್‌ಐಎ ಅಧಿಕಾರಿಗಳ 23 ತಂಡಗಳು ನಿಜಾಮಾಬಾದ್, ಕರ್ನೂಲ್, ಗುಂಟೂರು ಮತ್ತು ನೆಲ್ಲೂರು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿವೆ. ಭಯೋತ್ಪಾದನಾ ಚಟುವಟಿಕೆಗಳ ಮಾಹಿತಿಗೆ ಸಂಬಂಧಿಸಿದಂತೆ ದಾಳಿ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.
ಶೋಧದ ವೇಳೆ ಅಧಿಕಾರಿಗಳು ಈಗಾಗಲೇ ಪಿಎಫ್‌ಐ ಜಿಲ್ಲಾ ಸಂಚಾಲಕ ಶಾದುಲ್ಲಾ ಮತ್ತು ಸದಸ್ಯರಾದ ಮೊಹಮ್ಮದ್ ಇಮ್ರಾನ್ ಮತ್ತು ಮೊಹಮ್ಮದ್ ಅಬ್ದುಲ್ ಮೊಬಿನ್ ಅವರನ್ನು ವಿಚಾರಣೆಗೆ ಕರೆದೊಯ್ದಿದ್ದಾರೆ. ಕರಾಟೆ ಕಲಿಸುವ ನೆಪದಲ್ಲಿ ಹಿಂಸಾಚಾರ ಮತ್ತು ಕಾನೂನುಬಾಹಿರ ತರಬೇತಿಗೆ ಪ್ರಚೋದನೆ ನೀಡಿರುವ ಖಚಿತವಾ ಮಾಹಿತಿಯ ಮೇರೆಗೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
Previous Articleಸುರೇಶ್ ಪೂಜಾರಿ ಬಂಧನಕ್ಕೆ ಪೊಲೀಸ್ ಬಲೆ
Next Article ರಾಣಿ ಅಂತ್ಯಕ್ರಿಯೆಗೆ ಬೆಂಗಳೂರಿನ ಡಾ. ಮಥಾಯಿ