ಬೆಂಗಳೂರು, ನ. 14:
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಂಚು ರೂಪಿಸಿರುವ ಬಿಜೆಪಿ ಪಕ್ಷಾಂತರ ಮಾಡಲು ಕಾಂಗ್ರೆಸ್ ನ ಪ್ರತಿ ಶಾಸಕರಿಗೆ 50 ಕೋಟಿ ರೂಪಾಯಿವರೆಗೆ ಆಮಿಷ ಒಡ್ಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವರಾದ ಸತೀಶ್ ಜಾರಕಿಹೊಳಿ ಸಂತೋಷ್ ಲಾಡ್ ಎಚ್ ಕೆ ಪಾಟೀಲ್ ಮೊದಲಾದವರು ಮುಖ್ಯಮಂತ್ರಿ ಮಾಡಿರುವ ಆರೋಪ ಸತ್ಯವಾಗಿದೆ ಕಳೆದ ಕೆಲವು ತಿಂಗಳಿನಿಂದ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನ ನಡೆಸಿದೆ ಎಂದು ಹೇಳಿದ್ದಾರೆ.
ಈ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ ನಾಯಕರು ಖರೀದಿಸಲು ಕಾಂಗ್ರೆಸ್ ಶಾಸಕರೇನು ಕತ್ತೆ ಕುದುರೆಗಳೇ ಎಂದು ಪ್ರಶ್ನಿಸಿದೆ. ಅಲ್ಲದೆ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಆರೋಪ ಸಮರ್ಥಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಮ್ಮ ಎಂಎಲ್ಎ ಗಳಿಗೆ ಬಿಜೆಪಿಯವರು 50 ಕೋಟಿ ಆಮಿಷ ಒಡ್ಡಿರುವುದು ನಿಜ” ಎಂದು ಹೇಳಿದರು
ಬಿಜೆಪಿಯ ಕೆಲವು ನಾಯಕರು ನಡೆಸಿರುವ ಆಪರೇಷನ್ ಕಮಲದ ಬಗ್ಗೆ ನಮ್ಮ ಶಾಸಕರ ಬಳಿ ಮಾತನಾಡಿದ್ದಾರೆ. ಈ ವಿಚಾರವನ್ನು ಕೆಲವರು ಬಂದು ಮುಖ್ಯಮಂತ್ರಿಯ ಬಳಿ ತಿಳಿಸಿದ್ದಾರೆ. ಈ ಸಂಗತಿಯನ್ನು ಮುಖ್ಯಮಂತ್ರಿಗಳು ಮಾಧ್ಯಮದ ಮುಂದೆ ಹೇಳಿದ್ದಾರೆ. ಮಿಕ್ಕ ವಿಚಾರಗಳನ್ನು ಅನಂತರ ನಿಮಗೆ ತಿಳಿಸುತ್ತೇನೆ” ಎಂದು ಹೇಳಿದರು.
ಅಸ್ತಿರ ಯತ್ನ:
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಾತನಾಡಿ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರ ಗೊಳಿಸುವ ಪ್ರಯತ್ನ ನಡೆಯುತ್ತಿರುವುದು ಸತ್ಯ. ಆದರೆ ಅದಕ್ಕೆ ಎಷ್ಟು ಹಣ ಆಮಿಷ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದರು.
ಸರ್ಕಾರ ಅಸ್ತಿರಗೊಳಿಸುವ ಪ್ರಯತ್ನ ಇದೇನು ಹೊಸತಲ್ಲ ಈ ಹಿಂದೆಯೂ ಇಂತಹ ಪ್ರಯತ್ನ ನಡೆದಿತ್ತು, ಈ ಸರ್ಕಾರ ಇರುವವರೆಗೂ ಅದು ನಡೆಯಲಿದೆ ಎಂದು ಭವಿಷ್ಯ ನುಡಿದರು.
Previous Articleಬ್ಯಾಲೆಟ್ ಬಾಕ್ಸ್ ಗಳಿಂದಾಗಿ ಗೊಂದಲ.
Next Article ರೀಲ್ಸ್ ಗಾಗಿ ವಿದ್ಯಾರ್ಥಿಗಳ ಹುಚ್ಚಾಟ.