ಬೆಂಗಳೂರು.
ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ
ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದಂತೆ ದಾಖಲಿಸಲಾಗಿದ್ದ ಖಾಸಗಿ ದೂರಿನ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ
ತಮ್ಮ ವಿರುದ್ಧ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಖಾಸಗಿ ದೂರು ರದ್ದು ಕೋರಿ ಕೆ.ಜೆ.ಜಾರ್ಜ್ ಸಲ್ಲಿಸಿದ್ದರು.ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ನ್ಯಾಯಪೀಠ ತಡೆಯಾಜ್ಞೆ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ”ನಮ್ಮ ಕಕ್ಷಿದಾರರು ಜನಪ್ರತಿನಿಧಿಯಾಗಿದ್ದಾರೆ. ಅವರ ವಿರುದ್ಧದ ವಿಚಾರಣೆಗೆ ಭ್ರಷ್ಟಾಚಾರ ತಡೆ ಕಾಯಿದೆ ಸೆಕ್ಷನ್ 17ಎ ಅಡಿಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಆದರೆ, ಅರ್ಜಿದಾರರ ವಿರುದ್ಧ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ವಿಚಾರಣೆಗೆ ಪರಿಗಣಿಸಲಾಗಿದೆ. ಇದು ಕಾನೂನುಬಾಹಿರ” ಎಂದು ಪೀಠಕ್ಕೆ ವಿವರಿಸಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ತಡೆಯಾಜ್ಞೆ ನೀಡಿ,ಲೋಕಾಯುಕ್ತ ಎಸ್ಪಿ ಹಾಗೂ ದೂರುದಾರರಾದ ಬಿಜೆಪಿ ನಾಯಕರಾದ ಸಿಎನ್ ಅಶ್ವಥ್ ನಾರಾಯಣ್, ಎಸ್ ಆರ್ ವಿಶ್ವನಾಥ್, ಧೀರಜ್ ಮುನಿರಾಜು ಅವರಿಗೆ ನೋಟಿಸ್ ನೀಡಿದೆ
Previous Articleಹುಡುಗಿಯರ ಮಾತು ಕೇಳಿದ ಟೆಕ್ಕಿಗಳ ಗತಿ ನೋಡಿ !
Next Article ಬಿಜೆಪಿ ಮುಖಂಡನ ಹಂತಕರು ಅರೆಸ್ಟ್ !