ಮಂಗಳೂರು,ಜ.4-
ಜಾರಿ ನಿರ್ದೇಶನಾಲಯದ (ಇಡಿ) ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿದ ಖದೀಮರು 30 ಲಕ್ಷ ರೂ ದೋಚಿ ಪರಾರಿಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಬಳಿ ನಡೆದಿದೆ.
ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಎಂಬ ಹೆಸರಿನ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ತಮಿಳುನಾಡು ಮೂಲದ ಖದೀಮರ ತಂಡ ಸುಲೈಮಾನ್ ಹಾಜಿ ಅವರ ಮನೆಗೆ ಕಾರ್ನಲ್ಲಿ ಆಗಮಿಸಿದೆ.
ನಾವು ಇಡಿ ಅಧಿಕಾರಿಗಳು ಎಂದು ಸುಲೈಮಾನ್ ಹಾಜಿ ಅವರನ್ನು ನಂಬಿಸಿ ಸುಮಾರು ಎರಡು ಗಂಟೆಗಳವರೆಗೆ ಮನೆಯಲ್ಲ ಪರಿಶೀಲಿಸಿದ್ದಾರೆ. ಕೊನೆಗೆ ಮನೆಯಲ್ಲಿದ್ದ ಸುಮಾರು 30 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದ
Previous Articleಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕರು.
Next Article ಬಜೆಟ್ ನಂತರ ಸಿದ್ದರಾಮಯ್ಯ ರಾಜೀನಾಮೆ