Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಪನ್ಯಾಸಕರಲ್ಲ ಇವರು ರಾಕ್ಷಸರು.
    Trending

    ಉಪನ್ಯಾಸಕರಲ್ಲ ಇವರು ರಾಕ್ಷಸರು.

    vartha chakraBy vartha chakraಜುಲೈ 15, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Simple flat vector illustration of terrified young woman sit on floor with shadow of grabbing hands as a threat
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.15-
    ಶಿಕ್ಷಣ ನೀಡುವ ಗುರುವನ್ನು ನಮ್ಮ ಸಮಾಜ ದೇವರ ಪ್ರತಿರೂಪ ಎಂಬಂತೆ ಪೂಜನೀಯ ಸ್ಥಾನವನ್ನು ನೀಡಿದೆ.ತನ್ನ ಗುರು ಕೂಡ ಹೀಗೆ ಎಂದು ನಂಬಿದ ವಿದ್ಯಾರ್ಥಿನಿಯನ್ನು ಆಕೆಯ ಉಪನ್ಯಾಸಕರು ವಿಕೃತ ಕಾಮಿಯಂತೆ ಬಳಸಿಕೊಂಡು ಪೊಲೀಸರ ಅತಿಥಿಯಾಗಿದ್ದಾನೆ.
    ಉಪನ್ಯಾಸಕರು ಮಾತ್ರವಲ್ಲದೆ ಆತನ ಇಬ್ಬರು ಸ್ನೇಹಿತರು ಕೂಡಾ ವಿದ್ಯಾರ್ಥಿನಿಯನ್ನು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರವೆಸಗಿದ್ದಾರೆ.
    ವಿದ್ಯಾರ್ಥಿನಿ ಮೇಲೆ ನಿರಂತರ ಸಾಮೂಹಿಕ ಅತ್ಯಾಚಾರ ನಡೆಸಿದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ಸೇರಿ‌ ಮೂವರು ಕಾಮುಕರನ್ನು ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
    ಮೂಡುಬಿದಿರೆಯ ಕಾಲೇಜಿನ‌ ಭೌತಶಾಸ್ತ್ರ  ಉಪನ್ಯಾಸಕ ನರೇಂದ್ರ,ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಬಂಧಿತ ಆರೋಪಿಗಳಾಗಿದ್ದಾರೆ.
    ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಹತ್ತಿರದ ಪರಿಚಯವಾಗಿ ಬಳಿಕ ಹಂತ ಹಂತವಾಗಿ ಚಾಟ್ ಮಾಡುವುದು, ನೋಟ್ಸ್ ನೀಡುವುದು ಮಾಡಿದ್ದ. ಹಾಗೆಯೇ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ.
    ಈ ನಡುವೆ ವಿದ್ಯಾರ್ಥಿನಿ ಬೆಂಗಳೂರಿಗೆ ಬಂದಿದ್ದಾರೆ ಆನಂತರವೂ ಈ ಉಪನ್ಯಾಸಕ ಆಕೆಯ ಜೊತೆ ಪಾಠ ಪ್ರವಚನ ಕುರಿತು ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ.
    ಅದೇ ನೆಪದಲ್ಲಿ ಬೆಂಗಳೂರಿಗೆ ಬಂದು ಆಕೆಯನ್ನು ಮಾರತಹಳ್ಳಿಯ ಗೆಳೆಯನ ರೂಮ್​​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಅಷ್ಟೇ ಅಲ್ಲದೆ, ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ.
    ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಮತ್ತೊಬ್ಬ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ, ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ತನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ’ ಎಂದು ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ.
    ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್​ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ರೂಮ್​ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್​​ನಲ್ಲಿ ಸಿಸಿಟಿವಿ ಇದೆ’ ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ.
    ಉಪನ್ಯಾಸಕರನ್ನು ಎದುರಿಸಲು ಸಾಧ್ಯವಾಗದೆ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ನಂತರ ಸಮಸ್ಯೆ ಹೆಚ್ಚಾಗಲು ಆರಂಭವಾದಾಗ ಕೃತ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೊಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಗೆ ಕೌನ್ಸೆಲಿಂಗ್ ಮಾಡಿ ಪೊಲೀಸರಿಗೆ ದೂರು ಕೊಡಿಸಿದ್ದಾರೆ.
    ಮಹಿಳಾ ಆಯೋಗದ ಮಾಹಿತಿ ಮೇರೆಗೆ ಮೂವರು ಆರೋಪಿಗಳನ್ನು ಬಂಧಿಸಿರುವ ಮಾರತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಉಪನ್ಯಾಸಕರು ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು  ಹೆಚ್ಚಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

    Bangalore crime Government Karnataka News Trending Varthachakra ಬೆಂಗಳೂರು ವಿದ್ಯಾ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಆಟೋ ಪ್ರಯಾಣ ಬಲು ದುಬಾರಿ.
    Next Article ನಕಲಿ ವೀರರು ಅರೆಸ್ಟ್.
    vartha chakra
    • Website

    Related Posts

    ನಕಲಿ ವೀರರು ಅರೆಸ್ಟ್.

    ಜುಲೈ 15, 2025

    ಆಟೋ ಪ್ರಯಾಣ ಬಲು ದುಬಾರಿ.

    ಜುಲೈ 15, 2025

    ಪೊಲೀಸ್ ಆಡಳಿತಕ್ಕೆ ಮೇಜರ್ ಸರ್ಜರಿ.

    ಜುಲೈ 15, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಕಲಿ ವೀರರು ಅರೆಸ್ಟ್.

    ಉಪನ್ಯಾಸಕರಲ್ಲ ಇವರು ರಾಕ್ಷಸರು.

    ಆಟೋ ಪ್ರಯಾಣ ಬಲು ದುಬಾರಿ.

    ಪೊಲೀಸ್ ಆಡಳಿತಕ್ಕೆ ಮೇಜರ್ ಸರ್ಜರಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aag4q ರಲ್ಲಿ ಲಂಚ ಕೇಳಿದರೆ ಡಿಸಿಎಂ ಗೆ ಪತ್ರ ಬರೆಯಿರಿ.
    • Connietaups ರಲ್ಲಿ ಮುಂಬೈ ಕರ್ನಾಟಕಕ್ಕೆ ಸೇರಬೇಕಂತೆ.
    • can i order generic cephalexin no prescription ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ನಕಲಿ ವೀರರು ಅರೆಸ್ಟ್.

    ಜುಲೈ 15, 2025

    ಉಪನ್ಯಾಸಕರಲ್ಲ ಇವರು ರಾಕ್ಷಸರು.

    ಜುಲೈ 15, 2025

    ಆಟೋ ಪ್ರಯಾಣ ಬಲು ದುಬಾರಿ.

    ಜುಲೈ 15, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe