ಬೆಂಗಳೂರು.
ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿರುವಹಿರಿಯ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಕೃಷ್ಣ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಮೈಸೂರಿನ ಡಾ. ಸತ್ಯನಾರಾಯಣ ಅವರ ನೇತೃತ್ವದ ವೈದ್ಯಕೀಯ ತಂಡ ಆರೋಗ್ಯದ ಮೇಲೆ ನಿಗಾ ವಹಿಸಿದ್ದು ಅವರ ದೇಹ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ದೇಶದ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿದ್ದು ವಯೋ ಸಹಜ ಖಾಯಿಲೆಗಳ ಜೊತೆಗೆ ಅವರು ತೀವ್ರವಾದ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕಳೆದ ಏಪ್ರಿಲ್ 21ರಂದು ಎಸ್.ಎಂ ಕೃಷ್ಣರಿಗೆ ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ನಂತರ ಅವರು ಡಿಸ್ಟಾರ್ಜ್ ಸಹ ಆಗಿದ್ದರು. ಆದರೆ ಇದಾದ ಎರಡೇ ದಿನದಲ್ಲಿಎಸ್‌ಎಂ ಕೃಷ್ಣ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಉಸಿರಾಟದ ತೊಂದರೆಯಿಂದ ಬಳಲತೊಡಗಿದರು.
ತಕ್ಷಣವೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಪರಿಣಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಇದರಿಂದ ಚೇತರಿಸಿಕೊಂಡ ಎಸ್ಎಂ ಕೃಷ್ಣ ಅವರು ಎಲ್ಲರ ಜೊತೆಗೆ ಸಹಜವಾಗಿ ಮಾತನಾಡುತ್ತ ಲವಲವಿಕೆಯಿಂದ ಇದ್ದರು ಇನ್ನೇನು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಬೇಕು ಎನ್ನುತ್ತಿರುವಾಗಲೇ ಮತ್ತೆ ಅವರ ಆರೋಗ್ಯದಲ್ಲಿ ಏರು ಪೇರು ಉಂಟಾಗಿದೆ ಈ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ತೀವ್ರ ನಿಗ ಘಟಕದಲ್ಲಿಟ್ಟು ಚಿಕಿತ್ಸೆ ಮುಂದುವರಿಸಲಾಗಿದೆ.
ಆಸ್ಪತ್ರೆಯಲ್ಲಿ ಅವರ ಪತ್ನಿ ಮತ್ತು ಕುಟುಂಬ ಸದಸ್ಯರು ಹಾಜರಾಗಿದ್ದಾರೆ.

