ಬೆಂಗಳೂರು, ಮೇ 28:
ಕರ್ನಾಟಕ ಅರಣ್ಯ ಇಲಾಖೆ ತನಗೆ ನೀಡಲಾದ ವಾರ್ಷಿಕ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡಿರುವುದೇ ಅಲ್ಲದೆ, ರಾಜ್ಯದ ಅರಣ್ಯ ವಲಯ ವ್ಯಾಪ್ತಿಯ ಜೊತೆಗೆ ತನ್ನ ಆದಾಯವನ್ನೂ ಹೆಚ್ಚಿಸಿಕೊಂಡಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019-20ರ ಸಾಲಿನಲ್ಲಿದ್ದ ಅರಣ್ಯ ಇಲಾಖೆಯ ರಾಜಸ್ವ ಸಂಗ್ರಹಣೆ 263.41 ಕೋಟಿಯಿಂದ 2023-24ರ ಸಾಲಿನಲ್ಲಿ 417.84 ಕೋಟಿ ರೂ.ಗೆ ಹೆಚ್ಚಳವಾಗಿದೆ.
2023-24ನೇ ಸಾಲಿನಲ್ಲಿ ಅಧಿಸೂಚಿತ ಕಾಯ್ದಿಟ್ಟ ಅರಣ್ಯ (ಸೆಕ್ಷನ್ 17) ವ್ಯಾಪ್ತಿ 3395.73 ಹೆಕ್ಟೇರ್ ಅಂದರೆ ಸುಮಾರು 8300 ಎಕರೆಯಷ್ಟು ಹೆಚ್ಚಳವಾಗಿದ್ದರೆ, ರಕ್ಷಿತ ಅರಣ್ಯ ಪ್ರದೇಶ (ಸೆಕ್ಷನ್ 33) 184.52 ಹೆಕ್ಟೇರ್ ಅಂದರೆ 456 ಎಕರೆ ಹೆಚ್ಚಳವಾಗಿದೆ ಎಂದರು.
ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, 3 ಎಕರೆಗಿಂತಲೂ ಕಡಿಮೆ ಭೂಮಿ ಮಾತ್ರ ಇರುವ ಬಡ ರೈತರಿಗೆ ತೊಂದರೆ ಆಗದ ರೀತಿಯಲ್ಲಿ ಹಾಗೂ 3 ಎಕರೆಗಿಂತಲೂ ಹೆಚ್ಚು ಅರಣ್ಯ ಒತ್ತುವರಿ ಮಾಡಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿದೆ.
ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 371 ಪ್ರಕರಣಗಳಲ್ಲಿ ಸುಮಾರು 2602.30 ಎಕರೆ ಒತ್ತುವರಿ ತೆರವುಗೊಳಿಸಲಾಗಿದೆ. ತೆರವು ಮಾಡಲಾದ ಅರಣ್ಯ ಭೂಮಿಯ ಮಾರುಕಟ್ಟೆ ಮೌಲ್ಯ ಸುಮಾರು 1500 ಕೋಟಿ ರೂ. ಆಗುತ್ತದೆ ಎಂದರು.
ಕೋಲಾರದಲ್ಲಿ ಅತಿ ಹೆಚ್ಚು 1392.41ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಮಡಿಕೇರಿಯಲ್ಲಿ 5ಎಕರೆ 50ಗುಂಟೆ, ಬೆಂಗಳೂರಿನ ಕೊತ್ತನೂರಿನಲ್ಲಿ 17 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿಸಲಾಗಿದ್ದು, ಇದರ ಮಾರುಕಟ್ಟೆ ಮೌಲ್ಯ ಸುಮಾರು 500 ಕೋಟಿ ರೂ.ಗೂ ಅಧಿಕ ಎಂದು ತಿಳಿಸಿದರು.
5 ಕೋಟಿ ಸಸಿ:
ಕಳೆದ ವರ್ಷ ವಿಶ್ವ ಪರಿಸರ ದಿನದಂದು ಘೋಷಿಸಿದಂತೆ 5ಕೋಟಿ 40ಲಕ್ಷ ಸಸಿಗಳನ್ನು ರಾಜ್ಯದಾದ್ಯಂತ ನೆಡಲಾಗಿದ್ದು, ಇವುಗಳ ಪೈಕಿ ಎಷ್ಟು ಬದುಕುಳಿದಿವೆ ಎಂದು ತಿಳಿಯಲು ಆಡಿಟ್ ಮಾಡಿ 3 ತಿಂಗಳೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಈ ಸಾಲಿನಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕಾಗಿ ಹೆಚ್ಚುವರಿಯಾಗಿ 100 ಕೋಟಿ ರೂ. ಅನುದಾನ ನೀಡಲಾಗುತ್ತಿದೆ ಎಂದರು.
ಖಾಲಿ ಹುದ್ದೆಗಳ ಭರ್ತಿ:
ಅರಣ್ಯಇಲಾಖೆಯಲ್ಲಿ ಸುಮಾರು 6 ಸಾವಿರ ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಅರಣ್ಯ ವೀಕ್ಷಕರ 310 ಹುದ್ದೆಗಳ ನೇಮಕಾತಿಗೆ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಪೂರ್ಣವಾಗಿದ್ದು, ನೀತಿ ಸಂಹಿತೆ ತೆರವಾದ ಬಳಿಕ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.
ಇದರ ಜೊತೆಗೆ 540 ಅರಣ್ಯ ರಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಜೊತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆಯ ಪೂರ್ವಾನುಮತಿಯ ಅವಶ್ಯಕತೆ ಇಲ. ಹೀಗಾಗಿ ಈ ಭಾಗದಲ್ಲಿ ಖಾಲಿ ಇರುವ 10 ವಲಯ ಅರಣ್ಯಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಶೀಘ್ರ ಲಿಖಿತ ಪರೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದರು.
ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಿಣಿದಾರರ 143 ಹುದ್ದೆ, 45 ದ್ವಿತೀಯ ದರ್ಜೆ ಹಾಯಕರು ಮತ್ತು 18 ಪ್ರಥಮ ದರ್ಜೆ ಸಹಾಯಕರು ಸೇರಿದಂತೆ ವಿವಿಧ ವೃಂದದ ಖಾಲಿ ಹುದ್ದೆಗಳ ನೇಮಕಾತಿಗೂ ಕರಡು ಪ್ರಸ್ತಾವನೆ ಸಿದ್ಧಗೊಂಡಿದೆ ಎಂದು ಅರಣ್ಯ ಸಚಿವರು ವಿವರಿಸಿದರು.
ಗುತ್ತಿಗೆ ಭೂಮಿ ವಶಕ್ಕೆ ಕ್ರಮ:
ಕೊಡಗು, ಚಾಮರಾಜನಗರ, ಮೈಸೂರು ಭಾಗದಲ್ಲಿ ಸುಮಾರು 7500 ಎಕರೆ ಅರಣ್ಯ ಭೂಮಿಯನ್ನು ವಿವಿಧ ಕಂಪನಿಗಳಿಗೆ ಬ್ರಿಟಿಷರ ಕಾಲದಲ್ಲಿ ಗುತ್ತಿಗೆ ನೀಡಲಾಗಿದ್ದು, ಈ ಕಂಪನಿಗಳಿಂದ ಸುಮಾರು 2 ಸಾವಿರ ಕೋಟಿ ರೂ. ಬಾಕಿ ಬರಬೇಕಿದೆ. ಈ ಹಿನ್ನೆಲೆಯಲ್ಲಿ ಅವಧಿ ಮುಗಿದ ಭೂಮಿ ಮರು ಪಡೆಯಲು ಕ್ರಮ ವಹಿಸಲಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದರು.
6 ಪ್ರತಿಕ್ರಿಯೆಗಳು
порно коллекции бесплатно http://www.porn-library.ru .
создание сайтов продвижение http://prodvizhenie-sajtov15.ru/ .
карниз с электроприводом для штор купить http://www.provorota.su/ .
купить семена в интернет магазине почтой купить семена в интернет магазине почтой .
Кодировка от алкоголизма в Алматы цена Кодировка от алкоголизма в Алматы цена .
поиск объявления по номеру телефона поиск объявления по номеру телефона .