ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರಡಿ ಸಂಗಣ್ಣ, ಸವದಿ ಕಾಂಗ್ರೆಸ್ ಸೇರಲು ಸಜ್ಜು | Karadi Sanganna Amarappa | Congress
    ಸುದ್ದಿ

    ಕರಡಿ ಸಂಗಣ್ಣ, ಸವದಿ ಕಾಂಗ್ರೆಸ್ ಸೇರಲು ಸಜ್ಜು | Karadi Sanganna Amarappa | Congress

    vartha chakraBy vartha chakraಏಪ್ರಿಲ್ 11, 2023Updated:ಏಪ್ರಿಲ್ 12, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.11 – ಆಂತರಿಕ ಸಮೀಕ್ಷೆಗಳನ್ನು ಆಧರಿಸಿ, ಗೆಲ್ಲುವ ಮಾನದಂಡದೊಂದಿಗೆ, ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಸಂಸದೀಯ ಮಂಡಳಿ ಮುಂದಾಗಿರುವ ಹಿನ್ನೆಲೆಯಲ್ಲಿ ,ಕೆಲವು ಹಾಲಿ ಶಾಸಕರು ಮತ್ತು ಪ್ರಭಾವಿಗಳಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಇಂಥವರನ್ನು ಗುರುತಿಸಿರುವ ಕಾಂಗ್ರೆಸ್ ಅವರನ್ನು ತಮ್ಮತ್ತ ಸೆಳೆಯಲು ಪ್ರಯತ್ನ ನಡೆಸಿದೆ.

    ಪ್ರಮುಖವಾಗಿ, ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯದ ನಾಯಕರನ್ನು ಕಾಂಗ್ರೆಸ್ ತನ್ನತ್ತ ಸೆಳೆಯುತ್ತಿದ್ದು, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇದರ ನೇತೃತ್ವ ವಹಿಸಿದ್ದಾರೆ.
    ಜನತಾ ಪರಿವಾರದಲ್ಲಿದ್ದು ಸದ್ಯ ಬಿಜೆಪಿಯಲ್ಲಿರುವ ತಮ್ಮ ಆಪ್ತರನ್ನು ಕಾಂಗ್ರೆಸ್ ಗೆ ಬರುವಂತೆ ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.ಬೆಳಗಾವಿಯ ಅಥಣಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಪಟ್ಟು ಹಿಡಿದಿರುವ ಲಕ್ಷ್ಮಣ ಸವದಿ ಅವರಿಗೆ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದೆ. ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಇವರಿಗೆ ಟಿಕೆಟ್ ನೀಡುವುದು ಬೇಡ ಎಂಬ ತೀರ್ಮಾನಕ್ಕೆ ಬಂದಿದೆ. ವಿಧಾನಸಭೆಗೆ ಸ್ಪರ್ಧಿಸಲೇಬೇಕು ಎಂಬ ಹಟಕ್ಕೆ ಬಿದ್ದಿರುವ ಲಕ್ಷ್ಮಣ ಸವದಿ ಇದೀಗ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ.

    Ads Not Cleared, Officers Not Rotated: Congress Complains To Election Body

     

    ತಮ್ಮ ಆಪ್ತರೊಂದಿಗೆ ಈ ಸಂಬಂಧ ಚರ್ಚೆ ನಡೆಸಿರುವ ಅವರು ಸಿದ್ದರಾಮಯ್ಯ ಅವರೊಂದಿಗೆ ಕೂಡ ಮಾತುಕತೆ ನಡೆಸಿದ್ದಾರೆ. ಇವರೊಂದಿಗೆ ಬಾಗಲಕೋಟೆಯಲ್ಲಿ ತೇರದಾಳದಲ್ಲಿ ಟಿಕೆಟ್ ಕೈತಪ್ಪಿದೆ ಎಂದು ಭಾವಿಸಿರುವ ಸಿದ್ದು ಸವದಿ ಹಾಗೂ ತಮಗೆ ವಿಧಾನಸಭೆಗೆ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಕೇಳುತ್ತಿರುವ ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ‌ ಎಂದು ಉನ್ನತ ಮೂಲಗಳು ತಿಳಿಸುವೆ
    ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿರುವ ಸವದಿ ಮತ್ತು ಕರಡಿ ಸಂಗಣ್ಣ, ಉತ್ತರ ಕರ್ನಾಟಕದ ಕೆಲ ಪ್ರಭಾವಿ ಲಿಂಗಾಯತ ಮುಖಂಡರು ಮುಖಂಡರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಗೊತ್ತಾಗಿದೆ. ಕರಡಿ ಸಂಗಣ್ಣ ಸಂಸತ್ ಸದಸ್ಯರು ರಾಜೀನಾಮೆ ನೀಡಿ, ಕೊಪ್ಪಳದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನಸಭೆಗೆ ಸ್ಪರ್ಧಿಸಿದರೆ, ಅವರ ಪುತ್ರ ಗವಿಸಿದ್ದ ಕರಡಿ ಅವರು ಲಿಂಗಸಗೂರಿನಿಂದ ಕಣಕ್ಕಿಳಿಯುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

    ಕಳೆದ 2004, 2008 ಹಾಗೂ 2013ರಲ್ಲಿ ಬಿಜೆಪಿ ಶಾಸಕರಾಗಿ ಆಯ್ಕೆಯಾದ ಸವದಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮಹೇಶ ಕುಮಠಳ್ಳಿ ವಿರುದ್ಧ ಸೋತಿದ್ದರು. 2019ರಲ್ಲಿ ‘ಆಪರೇಷನ್‌ ಕಮಲ’ದ ಮೂಲಕ ಮಹೇಶ ಕುಮಠಳ್ಳಿ ಅವರನ್ನು ಬಿಜೆಪಿಗೆ ಕರೆತಂದು ಗೆಲ್ಲಿಸಲಾಗಿತ್ತು.
    ಕ್ಷೇತ್ರ ಬಿಟ್ಟುಕೊಟ್ಟ ಕಾರಣಕ್ಕೆ ಸವದಿ ಅವರನ್ನು ವಿಧಾನ ಪರಿಷತ್‌ಗೆ ನೇಮಕ ಮಾಡಿ, ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ಪ್ರಸಕ್ತ ಟಿಕೆಟ್‌ಗಾಗಿ ಕುಮಠಳ್ಳಿ ಹಾಗೂ ಸವದಿ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆಪರೇಷನ್‌ ಕಮಲದ ಸೂತ್ರಧಾರ ರಮೇಶ ಜಾರಕಿಹೊಳಿ ಕೂಡ ಕುಮಠಳ್ಳಿ ಪರ ಲಾಬಿ ನಡೆಸಿದ್ದರು.
    ಈ ಲಾಭಿಯಲ್ಲಿ ರಮೇಶ್ ಜಾರಕಿಹೊಳಿ ಯಶಸ್ವಿಯಾಗಿದ್ದು ಲಕ್ಷ್ಮಣ ಸವದಿ ಇದನ್ನು ತಮ್ಮ ಹಿನ್ನಡೆ ಎಂದು ಭಾವಿಸಿದ್ದಾರೆ. ಹೀಗಾಗಿ ರಾಜಕೀಯ ತೀರ್ಮಾನಕ್ಕೆ ಬಂದಿರುವ ಅವರು ಸಿದ್ದರಾಮಯ್ಯ ಅವರೊಂದಿಗಿನ ಆಪ್ತತೆ ಹಿನ್ನೆಲೆ ಅವರು ಕಾಂಗ್ರೆಸ್ ಸೇರಲು ಪ್ರಮುಖ ಕಾರಣ ಎನ್ನಲಾಗುತ್ತಿದೆ.
    ಕೇವಲ ಲಕ್ಷ್ಮಣ ಸವದಿ ಮಾತ್ರವಲ್ಲ ಕಿತ್ತೂರು ಕರ್ನಾಟಕ ಪ್ರಾಂತ್ಯಕ್ಕೆ ಸೇರಿದ ಲಕ್ಷ್ಮಣ ಸವದಿ ಅವರ ಕೆಲ ಆಪ್ತರು ಕೂಡ ಇದೀಗ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲು ಸಚ್ಚಾಗಿದ್ದಾರೆ ಎಂದು ಗೊತ್ತಾಗಿದೆ.

    Verbattle
    Verbattle
    Verbattle
    Congress m ಕಾಂಗ್ರೆಸ್ ಚುನಾವಣೆ ರಾಜಕೀಯ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಈಶ್ವರಪ್ಪ | Eshwarappa | BJP
    Next Article Electionಗಾಗಿ ಒಂದು 1000 ಕೋಟಿ ರೂಪಾಯಿ ಕೈ ಬದಲು
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    1 ಟಿಪ್ಪಣಿ

    1. HeapsofwinsOnline_ms4 on ಮಾರ್ಚ್ 18, 2026 11:45 ಫೂರ್ವಾಹ್ನ

      ngl heapsofwin hits different fr fr lol the whole thing is lowkey smooth tbh, imo its way better than other stuff ive seen, no cap

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Yjhkin ರಲ್ಲಿ ರಾಜಕಾರಣಿಗಳಿಗೆ ನಡುಕ
    • Mdmjdw ರಲ್ಲಿ ಮತದಾರರಿಗೆ Congress ಗ್ಯಾರಂಟಿ ಕಾರ್ಡ್
    • Lfzwsu ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.