ಬೆಂಗಳೂರು,ಆ.19-
ಪೊಲೀಸ್ ಅಧಿಕಾರಿಯೇ ಕಳ್ಳನಾದ ಸುದ್ದಿ ಇದು.
ಕಳ್ಳತನ ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡ ಪೊಲೀಸ್ ಇನ್‌ಸ್ಪೆಕ್ಟರ್ ಇದೀಗ ಬಂಧನ ಭೀತಿಯಿಂದ ಪರಾರಿಯಾಗಿದ್ದಾರೆ.
ಬೆಂಗಳೂರು ಹೊರ ವಲಯದ ಬಿಡದಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಶಂಕರ್ ನಾಯಕ್ ಕರ್ತವ್ಯ ನಿರ್ವಹಿಸುತಿದ್ದಾರೆ.
ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ ಶಂಕರ್ ನಾಯ್ಕ್ ಅವರು ಜಪ್ತಿ ಮಾಡಿದ್ದ 72 ಲಕ್ಷ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ ಸುಪರ್ದಿಗೆ ಕೊಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪವಿದೆ.
ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಶಂಕರ್ ಹಾಗೂ ಮಧ್ಯವರ್ತಿ ಲೋಕನಾಥ್ ವಿರುದ್ಧ ಕೇಸ್ ದಾಖಲಾಗಿತ್ತು. ಎಸಿಪಿ ಭರತ್ ರೆಡ್ಡಿ ದೂರು ಆಧರಿಸಿ ಪ್ರಕರಣ ದಾಖಲಾಗಿತ್ತು.
ಕಳೆದ2023ರ ನವೆಂಬರ್‌ನಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆಯನ್ನು ಕಮಿಷನರ್ ಸಿಸಿಬಿಗೆ ವಹಿಸಿಸಲಾಗಿತ್ತು. ಪ್ರಕರಣ ರದ್ದು ಕೋರಿ ಶಂಕರ್ ನಾಯ್ಕ್ ಹೈಕೋರ್ಟ್ ಮೆಟ್ಟಲೇರಿದ್ದರು. ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿತ್ತು. ಆದರೆ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಸಿಬಿ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯನ್ನು ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ತಡೆಯಾಜ್ಞೆ ತೆರವುಗೊಳಿಸುತ್ತಿದ್ದಂತೆ ಇನ್‌ಸ್ಪೆಕ್ಟರ್ ಶಂಕರ್ ನಾಯಕ್ ನಾಪತ್ತೆಯಾಗಿದ್ದಾರೆ
ಶಂಕರ್ ನಾಯ್ಕ್ ಪರಾರಿಯಾಗಿ ಈ ಪ್ರಕರಣದಲ್ಲಿ ತಮ್ಮ ಬಂಧನವಾಗಬಹುದು ಎಂಬ ಭೀತಿಯಿಂದ ಶಂಕರ್ ನಾಯಕ್ ತಲೆಮರೆಸಿಕೊಂಡಿದ್ದಾರೆ. ಕಳೆದ10 ದಿನಗಳಿಂದ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದು,ಆತನ ಬಂಧನಕ್ಕೆಸಿಸಿಬಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
Previous Articleಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ.
Next Article ಮುಖ್ಯಮಂತ್ರಿ ಬೆಂಬಲಕ್ಕೆ ನಿಂತ ಪ್ರಗತಿಪರರು.