Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲವಂತೆ.
    Trending

    ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲವಂತೆ.

    vartha chakraBy vartha chakraಜೂನ್ 14, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.14-
    ಕಾಂಗ್ರೆಸ್‌‍ ಎಂದಿಗೂ ಯಾರ ವಿರುದ್ಧವೂ ದ್ವೇಷದ ರಾಜಕಾರಣ ಮಾಡುವುದಿಲ್ಲ.ಆದರೆ ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡುವ ಮೂಲಕ ದ್ವೇಷದ ರಾಜಕಾರಣ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌
    ಆರೋಪಿಸಿದ್ದಾರೆ.
    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸುವ ಮೂಲಕ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವ ಅವರು,ದ್ವೇಷದ ರಾಜಕಾರಣದ ಬಗ್ಗೆ ನಾನು ಮಾತನಾಡಲು ಆರಂಭಿಸಿದರೆ ಅದು ಎಲ್ಲೆಲ್ಲಿಗೋ ಹೋಗುತ್ತದೆ. ನನಗೆ ಅದರ ನೋವು ಗೊತ್ತು. ನಾನು ಅನುಭವಿಸಿದ್ದೇನೆ ಎಂದು ಹೇಳಿದರು.
    ಕಾಂಗ್ರೆಸ್‌‍ನವರು ದ್ವೇಷ ರಾಜಕಾರಣ ಮಾಡುವುದಿಲ್ಲ. ರಾಹುಲ್‌ಗಾಂಧಿಯವರಿಗೆ ಅವರದ್ದೇ ಆದ ತೊಂದರೆಗಳಿವೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಮೂಗು ತೂರಿಸುವ ಅಗತ್ಯ ಅವರಿಗಿಲ್ಲ . ಕಾಂಗ್ರೆಸ್‌‍ನವರು ದ್ವೇಷ ಸಾಧಿಸಲು ನೀಚ ರಾಜಕಾರಣ ಮಾಡುವುದಿಲ್ಲ ಎಂದರು.
    ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಜಾಹೀರಾತು ನೀಡಿದ್ದು ನಾವು.ಇದಕ್ಕೆ ನಮ್ಮ ಮೇಲೆ ಪ್ರಕರಣ ದಾಖಲಿಸಲಿ, ಅದನ್ನು ಎದುರಿಸುತ್ತೇವೆ. ಆದರೆ ಇದರಲ್ಲಿ ರಾಹುಲ್‌ಗಾಂಧಿ ಅವರನ್ನು ಯಾಕೆ ಮಧ್ಯಕ್ಕೆ ತರಲಾಯಿತು. ಅವರೇನು ಕೆಪಿಸಿಸಿ ಅಥವಾ ಎಐಸಿಸಿ ಅಧ್ಯಕ್ಷರಾಗಿದ್ದರೇ? ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕಾಮನ್‌ಸೆನ್‌್ಸ ಇರಲಿಲ್ಲವೇ? ಅವರ ಪಕ್ಷದ ಎಂಎಲ್‌ಸಿ ಮೂಲಕ ಕೇಸು ಹಾಕಿಸಿದ್ದೇಕೆ? ಎಂದು ಪ್ರಶ್ನಿಸಿದರು.
    ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಹಿನ್ನಡೆಯಾಗಿರುವುದು ಹಾಗೂ ಮತದಾನ ಏಕೆ ಈ ರೀತಿ ಆಗಿದೆ ಎಂಬುದರ ಕುರಿತು ನಿನ್ನೆ ರಾತ್ರಿ ಒಕ್ಕಲಿಗ ಮುಖಂಡರ ಸಭೆಯಲ್ಲಿ ದೊಡ್ಡ ಚರ್ಚೆಯಾಗಿದೆ ಎಂದು ಹೇಳಿದರು.
    ಕಾಂಗ್ರೆಸ್‌‍ ಪಕ್ಷ ಸೋತಿದೆ. ಸೋಲನ್ನು ಒಪ್ಪಿಕೊಳ್ಳುತ್ತೇವೆ. ರಾಜಕಾರಣದಲ್ಲಿ ಸೋಲು-ಗೆಲುವು ಸಾಮಾನ್ಯ ಚೆಲುವರಾಯಸ್ವಾಮಿ, ಬಾಲಕೃಷ್ಣ, ಬಂಡಿ ಸಿದ್ದೇಗೌಡ ಸೇರಿದಂತೆ ಹಲವರು 50 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು. ಅದರ ನಂತರದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇವೆಲ್ಲಾ ಸಾಮಾನ್ಯ. ಆರು ತಿಂಗಳಲ್ಲಿ ಪರಿಸ್ಥಿತಿ ಬದಲಾಗುತ್ತಿದೆ. ಜನರ ಭಾವನೆಗಳು, ಕೆಲಸ ಕಾರ್ಯಗಳು ಬದಲಾಗುತ್ತವೆ. ಯಾವುದೂ ಶಾಶ್ವತವಲ್ಲ ಎಂದು ವಿಶ್ಲೇಷಿಸಿದರು.
    ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಒಂದೇ ಸ್ಥಾನದಲ್ಲಿ ಗೆದ್ದಿತ್ತು. ಈಗ 9 ಸ್ಥಾನಗಳನ್ನು ಗೆದ್ದಿದ್ದೇವೆ. ಇನ್ನೂ ನಾಲ್ಕೈದು ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಹಿನ್ನಡೆಯಾಗಿದೆ. ಕಾರ್ಯಕರ್ತರು ಚಿಂತೆ ಮಾಡುವ ಅಗತ್ಯವಿಲ್ಲ. ಮುಂದೆ ನಮ ಸರ್ಕಾರದ ಅಧಿಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
    2028ಕ್ಕೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷವನ್ನು ಮರಳಿ ಅಧಿಕಾರಕ್ಕೆ ತಂದೇ ತರುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲಾ ಸದಸ್ಯರು ಇದಕ್ಕಾಗಿ ಹಗಲು-ರಾತ್ರಿ ಕೆಲಸ ಮಾಡುತ್ತೇವೆ ಎಂದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ಯಡಿಯೂರಪ್ಪ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್ ಕೊಟ್ಟಿದ್ದ ಹಣ ಜಪ್ತಿ.
    Next Article ಯಡಿಯೂರಪ್ಪ ವಿಚಾರಣೆಗೆ ಬಂದರೆ ಸರಿ,ಇಲ್ಲವಾದರೆ..?
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • RicardoCor ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • 77_judi_pmmn ರಲ್ಲಿ ಗಂಗೆಯಲ್ಲಿ ಮೆಡಲ್ ವಿಸರ್ಜನೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.