ಬೆಂಗಳೂರು, Sep1 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಇದರೊಂದಿಗೆ ಎರಡು ದಿನಗಳಲ್ಲಿ ತುಮಕೂರಿನ ಇಬ್ಬರು ಪ್ರಭಾವಿ ನಾಯಕರು ಕಾಂಗ್ರೆಸ್ ತೊರೆದಿದ್ದಾರೆ.
ಈ ವಿದ್ಯಮಾನ ಗಮನಿಸಿದರೆ ರಾಜ್ಯ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಲ್ಲ ಎಂಬುದು ಮನವರಿಕೆಯಾಗುತ್ತಿದೆ.ಇವರೂ ಕೂಡ ಬಿಜೆಪಿ ಸೇರುತ್ತಿದ್ಸು ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.
ಹಳೆ ಮೈಸೂರು ಪ್ರಾಂತ್ಯದಲ್ಲಿ ಸಂಘಟನಾತ್ಮಕವಾಗಿ ಅಷ್ಟೇನೂ ಪ್ರಭಾವವಿಲ್ಲದ ಬಿಜೆಪಿ ಇತರೆ ಪಕ್ಷಗಳಲ್ಲಿ ಅಸಮಧಾನದಿಂದಿರುವ ನಾಯಕರನ್ನು ಸೆಳೆಯುತ್ತಿದ್ದು ಅದರ ಭಾಗವಾಗಿ ಇದೀಗ ಮುದ್ದಹನುಮೇಗೌಡ ಕೂಡ ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್ ಅವರ ಹಾದಿ ಹಿಡಿದಿದ್ದಾರೆ.
ಪಕ್ಷ ಬಿಡುವ ನಿರ್ಧಾರ ಪ್ರಕಟಿಸುವ ಮುನ್ನ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಲೋಕಸಭೆ ಚುನಾವಣೆ ಟಿಕೆಟ್ ನಿರಾಕರಿಸಿದಾಗ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆ.ಸಿ.ವೇಣುಗೋಪಾಲ್ ನನ್ನೊಂದಿಗೆ ಮಾತನಾಡಿದರು, ಬಳಿಕ ಹೈಕಮಾಂಡ್ ನನ್ನೊಂದಿಗೆ ಯಾವ ಸಂಪರ್ಕವನ್ನು ಇಟ್ಟುಕೊಂಡಿಲ್ಲ. ಇತ್ತೀಚಿನ ರಾಜಕೀಯ ವಿದ್ಯಮಾನಗಳಿಂದ ನನಗೆ ಬೇಸರವಾಗಿದೆ.
ಅನಿವಾರ್ಯವಾಗಿ ಪಕ್ಷ ಬಿಡುವ ನಿರ್ಧಾರ ಮಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ, ಪಕ್ಷದಿಂದ ನನ್ನನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದೇನೆ ಎಂದರು.
ನಾನು ಪಕ್ಷದಿಂದ ಮಾನಸಿಕವಾಗಿ ದೂರು ಸರಿದಿದ್ದೇನೆ. ಮುಂದಿನ ಬಾರಿ ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಕಾಂಗ್ರೆಸ್ ನನಗೆ ಈವರೆಗೂ ಸಾಕಷ್ಟು ಅವಕಾಶಗಳನ್ನು ನೀಡಿದೆ. ನಾನು ಅದಕ್ಕಿಂತಲೂ ಹೆಚ್ಚಿನ ಸೇವೆ ಸಲ್ಲಿಸಿದ್ದೇನೆ ಎಂದು ಹೇಳಿದರು.
Previous Articleಹಣಕ್ಕಾಗಿ ಜಾಕ್ವೆಲಿನ್ ಮಾಡಿದ್ದೇ ಇದು..
Next Article Gang rape ಪಾತಕಿಗಳು ಅರೆಸ್ಟ್