ಬೆಂಗಳೂರು,ಜ.21-
ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿಯ ಶಾಸಕ ಎಸ್ ಟಿ ಸೋಮಶೇಖರ್ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಕಾಣಿಸಿಕೊಳ್ಳುವ ಮೂಲಕ ಆಚ್ಚರಿ ಮೂಡಿಸಿದ್ದಾರೆ.
ಪಕ್ಷದ ಸಂಘಟನಾತ್ಮಕ ವಿಷಯಗಳ ಕುರಿತಂತೆ ಬಿಜೆಪಿಯ ಎಲ್ಲ ಚುನಾಯಿತ ಪ್ರತಿನಿಧಿಗಳೊಂದಿಗೆ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಬೆಂಗಳೂರಿನಲ್ಲಿ ಅಗರ್ವಾಲ್ ಸಭೆ ನಡೆಸುತ್ತಿದ್ದಾರೆ. ಈ ಸಭೆಯಿಂದ ದೂರ ಉಳಿದ ಸೋಮಶೇಖರ್ ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನ ಜೈ ಬಾಪು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಾರೆ.
ಸಮಾವೇಶದಲ್ಲಿ ಪಾಲ್ಗೊಂಡ ಎಸ್. ಟಿ. ಸೋಮಶೇಖರ್ ಮಾಧ್ಯಮಗಳ ಜೊತೆ ಮಾತನಾಡಿದ್ದು, “ಇದು ಸರ್ಕಾರಿ ಕಾರ್ಯಕ್ರಮವಾಗಿದೆ. ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣ ಮಾಡಲಾಗುತ್ತಿದೆ. ಸರ್ಕಾರದ ಆಹ್ವಾನವಿತ್ತು ಮಹಾತ್ಮ ಗಾಂಧಿ ಅವರ ಅನುಯಾಯಿಯಾಗಿ, ಒಬ್ಬ ಶಾಸಕನಾಗಿ ನನ್ನ ಕರ್ತವ್ಯ ಇದಕ್ಕೆ ಗೌರವ ಕೊಡುವುದು. ಆದ್ದರಿಂದ ಬೆಂಗಳೂರಿನಿಂದ ಈ ಕಾರ್ಯಕ್ರಮಕ್ಕಾಗಿ ಬಂದಿದ್ದೇನೆ” ಎಂದರು.
ಯಾರಿಗೆ ಮಹಾತ್ಮ ಗಾಂಧಿ ಅವರ ಮೇಲೆ ಗೌರವವಿದೆ ಅವರು ಇಂತಹ ಕಾರ್ಯಕ್ರಮಗಳಿಗೆ ಬರಬೇಕು, ನಾನು ಬಂದಿದ್ದೇನೆ. ನಾನು ಮೂಲ ಕಾಂಗ್ರೆಸಿಗ, ಗಾಂಧಿ ಅನುಯಾಯಿ. ಸಂತೋಷದಿಂದ ಕಾರ್ಯಕ್ರಮಕ್ಕೆ ಬಂದಿದ್ದೇನೆ” ಎಂದು ಎಸ್. ಟಿ. ಸೋಮಶೇಖರ್ ಸ್ಪಷ್ಟಪಡಿಸಿದರು.
Previous Articleನಟ ದರ್ಶನ್ ಗನ್ ಲೈಸೆನ್ಸ್ ರದ್ದು
Next Article ಸಾರಿಗೆ ಸಂಸ್ಥೆ ಬಸ್ ಜಪ್ತಿ ಮಾಡಿದರು