Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾರಿನಲ್ಲೂ ಭ್ರೂಣ ಲಿಂಗ ಪತ್ತೆ.
    Trending

    ಕಾರಿನಲ್ಲೂ ಭ್ರೂಣ ಲಿಂಗ ಪತ್ತೆ.

    vartha chakraBy vartha chakraಸೆಪ್ಟೆಂಬರ್ 11, 202428 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ,ಸೆ.11- ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ಒಂಟಿ ಮನೆ ಹಾಗೂ ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ
    6 ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದು,ಇವರ ಬಂಧನದಿಂದ ಪ್ರಕರಣದಲ್ಲಿ ಸೆರೆಯಾದವರ ಸಂಖ್ಯೆ 30ಕ್ಕೇ ಏರಿಕೆಯಾಗಿದೆ.
    ಬನ್ನೂರಿನ ರಾಮಕೃಷ್ಣ, ಗುರು, ಮೈಸೂರಿನ ಸೋಮಶೇಖರ್ ಪಟೇಲ್, ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್, ಹರಳಹಳ್ಳಿಯ ಜಬ್ಬರ್, ಕೆ.ಆರ್. ನಗರದ ಶಂಕರ್ ಬಂಧಿತ ಆರೋಪಿಗಳಾಗಿದ್ದಾರೆ.
    ಬಂಧಿತ ಆರೋಪಿಗಳು ಒಂದು ಹೆಣ್ಣುಭ್ರೂಣ ಹತ್ಯೆಗೆ 10ರಿಂದ 50 ಸಾವಿರದವರೆಗೆ ಶುಲ್ಕ ಸಂಗ್ರಹಿಸುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
    ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ಕ್ರಿಯಾಶೀಲವಾಗಿದ್ದ  ತಂಡವು ಕಳೆದ ಹಲವು ವರ್ಷಗಳಿಂದ ಕರಾಳದಂಧೆ ನಡೆಸುತ್ತಿತ್ತು. ಆರೋಪಿಗಳು ಪೊಲೀಸ್, ಆರೋಗ್ಯ ಇಲಾಖೆಯ ಕಣ್ತಪ್ಪಿಸಿ ದಂಧೆ ನಡೆಸುತ್ತಿದ್ದರು.  ಬಂಧಿತರಿಂದ ಸ್ಕ್ಸಾನಿಂಗ್ ಮಶೀನ್, ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಇದುವರೆಗೂ 50ಕ್ಕೂ ಹೆಚ್ಚು ಹೆಣ್ಣುಭ್ರೂಣ ಹತ್ಯೆ ಮಾಡಿರುವುದು ಬಯಲಾಗಿದೆ.
    ಆಸ್ಪತ್ರೆಗೆ ಸೋನೋಗ್ರಫಿ ಟೆಸ್ಟ್ ಮಾಡಿಸಿಕೊಳ್ಳಲು ಬರುವವರನ್ನೇ ಈ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು.
    ಭ್ರೂಣ ಲಿಂಗ ಪತ್ತೆಗಾಗಿ ಈ ಖದೀಮರು ವಿಶೇಷ ವ್ಯವಸ್ಥೆಯನ್ನೇ ಮಾಡಿಕೊಂಡಿರುವುದು ಪತ್ತೆಯಾಗಿದೆ ಇದಕ್ಕಾಗಿ ಕಾರನ್ನು ವಿಶೇಷವಾಗಿ ವಿನ್ಯಾಸ ಮಾಡಿಸಿ ಅದರಲ್ಲಿ ಪ್ರಯೋಗಾಲಯದ ಎಲ್ಲಾ ಉಪಕರಣಗಳನ್ನು ಅಳವಡಿಸಿಕೊಂಡಿದ್ದಾರೆ ಈ ಮೂಲಕ ಭ್ರೂಣ ಲಿಂಗ ಪತ್ತೆ ಮಾಡಿದ ನಂತರ ಅದಕ್ಕಾಗಿಯೇ ಸಿದ್ಧಪಡಿಸಿದ ಸ್ಥಳದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
    ವಾರದ ಹಿಂದೆ ಕಿಂಗ್ ಪಿನ್ ಅಭಿಷೇಕ್ ಹಾಗೂ ವಿರೇಶ್ ಸೇರಿ 12 ಮಂದಿ ಆರೋಪಿಗಳನ್ನು ಬಂಧಿಸಿ ಮತ್ತೆ 6 ಮಂದಿ ಜೊತೆಗೆ ಇದೀಗ ಮತ್ತೆ 6 ಜನರನ್ನು ಬಂಧಿಸಲಾಗಿದೆ. ಇನ್ನು ಕೆಲವರು ಈ ಕರಾಳದಂಧೆಯಲ್ಲಿ ನಿರತರಾಗಿರುವ ಅನುಮಾನವಿದೆ ಈ ಹಿನ್ನೆಲೆಯಲ್ಲಿ
    ಪ್ರಕರಣ ಭೇದಿಸಲು ಏಳು ತಂಡ ರಚನೆ ಮಾಡಲಾಗಿದೆ. ಪ್ರಕರಣದಲ್ಲಿ ಕೆಲ ವೈದ್ಯರು ಭಾಗಿಯಾಗಿದ್ದಾರೆ. ಅವರ ಬಂಧನಕ್ಕೂ ಖಾಕಿ ಮುಂದಾಗಿದೆ. ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ.
    ಪ್ರಕರಣ ಹಿನ್ನೆಲೆ:
    ಮೊದಲಿಗೆ ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ನಡೆಯುತ್ತಿದ್ದ ಕರಾಳದಂಧೆಯನ್ನ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿ ಹಲವು ಮಂದಿಯನ್ನ ಬಂಧಿಸಿದ್ದರು. ಆನಂತರ ಈ ಪ್ರಕರಣವನ್ನ ಸಿಐಡಿಗೂ ವಹಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಕಿಂಗ್ ಪಿನ್ ಆಗಿದ್ದ ಅಭಿಷೇಕ್ ಬಂಧನವಾಗದೇ ತಲೆ ಮರೆಸಿಕೊಂಡಿದ್ದ. ಆನಂತರ ಪಾಂಡವಪುರದ ಹೆಲ್ತ್ ಕ್ವಾಟ್ರಸ್, ಮೇಲುಕೋಟೆ, ನಾಗಮಂಗಲ ಸೇರಿದಂತೆ ಹಲವು ಕಡೆಗಳಲ್ಲಿ ನಡೆಯುತ್ತಿದ್ದ ಕರಾಳದಂಧೆ ಬೇಧಿಸಿ ಹಲವು ಆರೋಪಿಗಳನ್ನು ಬಂಧನ ಮಾಡಲಾಗಿತ್ತು. ಆದರೆ ಐದು ಪೊಲೀಸರಿಗೆ ಚಳ್ಳೆಯನ್ನು ತಿನ್ನಿಸಿ ಕಿಂಗ್ ಪಿನ್ ಅಭಿಷೇಕ್ ಕರಾಳದಂಧೆಯನ್ನ ಮುಂದುವರೆಸಿಕೊಂಡು ಹೋಗಿದ್ದ. ಈತನ ಬಂಧನಕ್ಕಾಗಿಯೇ ಏಳು ತಂಡಗಳನ್ನ ರಚನೆ ಮಾಡಲಾಗಿತ್ತು. ಕೊನೆಗೂ ಐನಾತಿ ಅಭಿಷೇಕ್ ಬಂಧನವಾಗಿದೆ.

    Verbattle
    Verbattle
    Verbattle
    Bangalore Government Karnataka News Trending Varthachakra ಆರೋಗ್ಯ ಕಾರು ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleನಟ ಕಿರಣ್ ರಾಜ್ ಸ್ಥಿತಿ ಗಂಭೀರ
    Next Article ಜೈಲಿನಲ್ಲಿ ಖೈದಿ ಉಪವಾಸ ಸತ್ಯಾಗ್ರಹ.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Glennhof ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Glennhof ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.