ಬೆಂಗಳೂರು,ಜೂ.27- ಐಪಿಎಲ್ ನಲ್ಲಿ ಆರ್ ಸಿಬಿ ಜಯಗಳಿಸಿದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಲು ಉಚಿತ ಟಿಕೆಟ್ ಘೋಷಣೆ ಮಾಡಿದ್ದು ಪ್ರಮುಖ ಕಾರಣವಾಗಿದೆ ಎಂದು ಅಮಾನತಾಗಿರುವ ನಗರ ಪೊಲೀಸ್ ಮಾಜಿ ಆಯುಕ್ತ ಬಿ. ದಯಾನಂದ್ ಮ್ಯಾಜಿಸ್ಟ್ರೇಟ್ ವಿಚಾರಣೆಯಲ್ಲಿ ತಿಳಿಸಿದ್ದಾರೆ.
ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದ ಮ್ಯಾಜಿಸ್ಟ್ರೇಟ್ ತನಿಖೆಯಲ್ಲಿ ಪ್ರಮುಖ ಭಾಗವಾದ ದಯಾನಂದ್ ಅವರ ಹೇಳಿಕೆಯನ್ನು ದಾಖಲು ಮಾಡಲಾಗಿದೆ.
ಮ್ಯಾಜಿಸ್ಟ್ರೇಟ್ ಮುಂದೆ ನಿನ್ನೆ ವಿಚಾರಣೆಗೆ ಹಾಜರಾದ ದಯಾನಂದ್ ಅಂದು ನಡೆದ ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ.
ಘಟನೆ ನಡೆದ ದಿನ 21 ಗೇಟ್‌ಗಳಿಗೂ ನಾನೇ ಖುದ್ದಾಗಿ ಭೇಟಿ ನೀಡಿದ್ದೆ. ಸಂಪೂರ್ಣವಾಗಿ ಬಂದೋಬಸ್ತ್ ಮಾಡಿಕೊಳ್ಳಲಾಗಿತ್ತು.ಪ್ರತಿ ಬಾರಿ ಐಪಿಎಲ್ ಮ್ಯಾಚ್ ನಡೆಯುವಾಗ ಇರುವಷ್ಟು ಬಂದೋಬಸ್ತ್ ಮಾಡಿಕೊಳ್ಳಲಾಗಿತ್ತು.
ಆದರೆ ಅಂದು ಗೇಟ್ ತೆಗೆಯಲು ತಡಮಾಡಿದ್ದರು. ಉಚಿತ ಟಿಕೆಟ್ ಎಂದು ಘೋಷಣೆ ಮಾಡಿದ್ದರಿಂದ ಇಷ್ಟೆಲ್ಲ ಅವಾಂತರ ನಡೆದಿದೆ ಎಂದು ಹೇಳಿಕೆ ದಾಖಲಿಸಿದ್ದಾರೆ.
ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತಕ್ಕೆ ಬಲಿಯಾದ 11 ಜನರ ಸಾವಿನ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು,ಇಲ್ಲಿಯವರೆಗೆ 140 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದ್ದು ಮುಂದಿನ ವಾರ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗುವ ಸಾಧ್ಯತೆಯಿದೆ
Previous Articleಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
Next Article ಸಂವಿಧಾನ ಪೀಠಿಕೆ ಬದಲಿಸಿದರೆ ರಕ್ತಪಾತ.