ಬೆಂಗಳೂರು, ಮೇ 10-
ಲೋಕದ ಡೋಂಕ ನೀವೇಕೆ ತಿದ್ದುವರಿ, ನಿಮ್ಮ ನಿಮ್ಮ ತನುವ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ. ಇದು ಹಾಸನದ ಪೆನ್ ಡ್ರೈವ್ ಪ್ರಕರಣ ಕುರಿತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಉತ್ತರ.
ಬಸವ ಜಯಂತಿ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್‌ಡ್ರೈವ್ ಪ್ರಕರಣಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಆದರೆ ಕುಮಾರಸ್ವಾಮಿ ಅವರ ಆರೋಪ ಕುರಿತಂತೆ ಮೊದಲು ನಿಮ್ಮ ಮನೆಯನ್ನು ಸರಿ ಪಡಿಸಿಕೊಳ್ಳಿ ಎಂದು ಹೇಳಿದರು
ಇಂದು ಬಸವಣ್ಣನವರ ಕೆಲಸ. ಇಲ್ಲಿ ಬೇರೆ ವಿಚಾರಗಳ ಚರ್ಚೆ ಸೂಕ್ತವಲ್ಲ. ಬಸವಣ್ಣ ಏನು ಹೇಳಿದ್ದಾರೆ. ಲೋಕದ ಡೋಂಕ ನೀವೇಕೆ ತಿದ್ದುವರಿ, ನಿಮ ನಿಮ ತನುವ, ನಿಮ ನಿಮ ಮನವ ಸಂತೈಸಿಕೊಳ್ಳಿ ಎಂದಿದ್ದಾರೆ. ಬೇರೆಯವರ ಮೇಲೆ ಏಕೆ ಜವಾಬ್ದಾರಿ ಹೊರಿಸುತ್ತಿರಿ.
ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ. ಮೊದಲು ನಿಮ ಮನೆ ರಿಪೇರಿ ಮಾಡಿಕೊಳ್ಳಿ ಎಂದರು.
ಬೇರೆಯವರ ಬಗ್ಗೆ ಏಕೆ ಮಾತನಾಡುತ್ತಿರಿ. ಲೋಕದ ಡೋಂಕನ್ನು ತಿದ್ದಿಕೊಳ್ಳಿ ಎಂದು ಬಸವಣ್ಣ ಹೇಳಿದ್ದಾರೆ. ನಾವು ಅದನ್ನು ಪಾಲಿಸೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ. ರಾಜ್ಯಪಾಲರಿಗೆ ದೂರು ನೀಡಿರುವ ಕುಮಾರಸ್ವಾಮಿಯವರಿಗೆ ಶುಭವಾಗಲಿ ಎಂದು ಹಾರೈಸುವುದಾಗಿ ಹೇಳಿದರು.

