ಬೆಂಗಳೂರು: ದೇವನಹಳ್ಳಿಯಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದರಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.
ಶುಕ್ರವಾರ ಬೆಳಗಿನ ಜಾವ 3:30ರ ವೇಳೆಗೆಈ ಬಾಂಬ್ ಬೆದರಿಕೆ ಕರೆ ಬಂದಿದೆ. ಅಪರಿಚಿತನೊಬ್ಬ ಬೆಂಗಳೂರು ನಗರ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾನೆ.
ತಕ್ಷಣ ಎಚ್ಚೆತ್ತ ಪೊಲೀಸರು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ಕೈಗೊಂಡರು. ಶ್ವಾನದಳದಿಂದಲೂ ತಪಾಸಣೆ ಕೈಗೊಳ್ಳಲಾಗಿತ್ತು. ವಿಮಾನ ನಿಲ್ದಾಣದ ಏರ್ ಲೈನ್ಸ್ ಗೇಟ್ ಟರ್ಮಿನಲ್ ಗಳಲ್ಲಿ ತೀವ್ರ ತಪಾಸಣೆ ನಡೆಸಲಾಗಿದೆ. ಬೆದರಿಕೆ ಕರೆ ಹಿನ್ನೆಲೆಯಲ್ಲಿ ಕೆಲ ವಿಮಾನಗಳ ಸಂಚಾರ ವಿಳಂಬವಾಯಿತು. ತೀವ್ರ ತಪಾಸಣೆ ಬಳಿಕ ಇದೊಂದು ಹುಸಿಬಾಂಬ್ ಬೆದರಿಕೆ ಕರೆ ಎಂಬುದು ದೃಢವಾಯಿತು. ಪ್ರಕರಣ ದಾಖಲಿಸಿಕೊಂಡಿರುವ ಬಾಂಬ್ ಬೆದರಿಕೆ ಕರೆಮಾಡಿದ ಅಪರಿಚಿತನಿಗಾಗಿ ಶೋಧ ಆರಂಭಿಸಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ವಿಮಾನ ಹಾರಾಟ ವಿಳಂಬ
Previous Articleಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ: ಸಚಿವ ನಾಗೇಶ್
Next Article ಕೆನಡಾದಲ್ಲಿ ಕನ್ನಡ!