Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಪಿಟಿಸಿಎಲ್ ನೌಕರರಿಗೆ ಇಂಧನ ಮಂತ್ರಿ ಸಲಹೆ.
    Viral

    ಕೆಪಿಟಿಸಿಎಲ್ ನೌಕರರಿಗೆ ಇಂಧನ ಮಂತ್ರಿ ಸಲಹೆ.

    vartha chakraBy vartha chakraಜೂನ್ 18, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂನ್ 18:
    ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
    ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ‌ ನೌಕರರ ಸಂಘ ಆಯೋಜಿಸಿದ್ದ,ವಜ್ರಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, “ಕೆಪಿಟಿಸಿಎಲ್ ನೌಕರರ ಸಂಘದ ಉತ್ಸಾಹ ಹಾಗೂ ಸ್ಪೂರ್ತಿ ನೋಡಿದರೆ ನಾವು ಮತ್ತಷ್ಟು ಜನಪರ ಯೋಜನೆಗಳನ್ನು ರೂಪಿಸಿದರೂ ಅದನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಾರೆ ಎಂಬ ವಿಶ್ವಾಸ ಬರುತ್ತದೆ,” ಎಂದರು.
    ರಾಜ್ಯ ಸರ್ಕಾರ, ಇಂಧನ ಇಲಾಖೆ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿರುವ ನೌಕರರ ಪರವಾಗಿದೆ. ನೌಕರರ ಬೇಡಿಕೆಗಳನ್ನು ಆಡಳಿತ ಮಂಡಳಿ ಸಭೆಯ ಮುಂದೆ ಇಟ್ಟು ಸೂಕ್ತ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು”.
    ನಮ್ಮ ಸರ್ಕಾರದ ಪ್ರಮುಖ ಗ್ಯಾರಂಟಿ ಘೋಷಣೆ ಗೃಹಜ್ಯೋತಿ. ಇಂದು 1.65 ಕೋಟಿ ಮನೆಗಳಿಗೆ ತಲುಪಿದೆ. ಇವರೆಲ್ಲರಿಗೂ ಜೀರೋ ಬಿಲ್ ವಿತರಿಸುತ್ತಿದ್ದೇವೆ. ಅದೇ ರೀತಿ ಕುಸುಮ್- ಸಿ ಯೋಜನೆಗೆ ರಾಜ್ಯ ಸರ್ಕಾರ ಶೇಕಡಾ 50 ರಷ್ಟು ಸಬ್ಸಿಡಿ ನೀಡುತ್ತಿದೆ, ಕೇಂದ್ರ ಶೇಕಡಾ 30 ರಷ್ಟು ಸಬ್ಸಿಡಿ ನೀಡುತ್ತಿದೆ. ಇದು ರೈತರಿಗೆ ಬಲ‌ತಂದಿದೆ. ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ ವಿದ್ಯುತ್ ಒದಗಿಸುವ ಈ ಯೋಜನೆಗೆ ಚಾಲನೆ ನೀಡಿದ್ದೇವೆ ಎಂದು ಹೇಳಿದರು.
    ರೈತರಿಗೆ ಸಮರ್ಪಕ ವಿದ್ಯುತ್ ನೀಡಲು ಕೆಪಿಟಿಸಿಎಲ್ ವತಿಯಿಂದ ಹೆಚ್ಚುವರಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುತ್ತಿದ್ದೇವೆ, ಇದು ರೈತರಿಗೆ ಶಕ್ತಿ ನೀಡಿದೆ ಎಂದು ಹೇಳಲು ಹೆಮ್ಮೆಪಡುತ್ತೇನೆ,” ಎಂದು ಹೇಳಿದರು.
    ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಹೇಳಿದಂತೆ ಜೈ ಜವಾನ್ ಜೈ ಕಿಸಾನ್ ಎಂಬುದನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ರೈತರಿಗೆ ಹೆಚ್ಚಿನ ಯೋಜನೆ, ಸೌಲಭ್ಯ ಒದಗಿಸುತ್ತಿದೆ,” ಎಂದು ತಿಳಿಸಿದರು.
    ಕೇಂದ್ರದ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಮಂತ್ರಿಗಳೇ ನಮ್ಮ ಪವನ ವಿದ್ಯುತ್ ಯೋಜನೆಗಳಿಗೆ ‘ನಂಬರ್ ಒನ್’ ಸಾಧನೆ ಬಗ್ಗೆ ಪುರಸ್ಕಾರ ನೀಡಿದ್ದಾರೆ. ಈ ಹಿಂದೆ ಸೌರ ವಿದ್ಯುತ್ ಕ್ಷೇತ್ರದಲ್ಲಿ ಪಾವಗಡದಲ್ಲಿ ಸ್ಥಾಪಿಸಿದ್ದ ಸೌರ ಘಟಕ ದೇಶದಲ್ಲೇ ನಂಬರ್ ಒನ್ ಇತ್ತು. ಮತ್ತೆ ನಂಬರ್ ಒನ್ ನತ್ತ ಹೆಜ್ಜೆ ಇಡುತ್ತಿದ್ದೇವೆ. ನಾವೆಲ್ಲರೂ ಸೇರಿ ಮತ್ತಷ್ಟು ಶ್ರಮಿಸಿ ಸೌರ ವಿದ್ಯುತ್ ಕ್ಷೇತ್ರದಲ್ಲೂ ಕರ್ನಾಟಕ ಮೊದಲ ಸ್ಥಾನಕ್ಕೆ ಬರುವಂತೆ ಮಾಡಬೇಕಿದೆ,” ಎಂದು ತಿಳಿಸಿದರು.

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.
    Next Article ಭದ್ರತಾ ಆಯೋಗ ಅಸ್ತಿತ್ವಕ್ಕೆ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • alpha66_bvKr ರಲ್ಲಿ ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    • LinwoodGah ರಲ್ಲಿ ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • Tracymix ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    Latest Kannada News

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.