ಬೆಂಗಳೂರು,ಆರ್.27:
ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದ್ದ ಡಿ ವೈ ಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ಮತ್ತು ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣದ ತನಿಖೆ ನಡೆಸಿದ ಸಿಬಿಐ ಮತ್ತು ಕರ್ನಾಟಕ ಸಿಐಡಿ ತಂಡ ಇದರಲ್ಲಿ ಕೆ.ಜೆ.ಜಾರ್ಜ್ ಮತ್ತು ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಾಂತಿ ಹಾಗೂ ಎಎಂ ಪ್ರಸಾದ್ ವಿರುದ್ಧ ಯಾವುದೇ ಸಾಕ್ಷಿ ಇಲ್ಲ ಎಂದು ಬಿ ರಿಪೋರ್ಟ್ ಸಲ್ಲಿಸಿದ್ದವು ಇದನ್ನು ರಾಜ್ಯ ಹೈಕೋರ್ಟ್ ಮಾನ್ಯ ಮಾಡಿತ್ತು.
ಇದನ್ನು ಪ್ರಶ್ನಿಸಿ ಮೃತ ಗಣಪತಿ ಅವರ ಸಹೋದರಿ ಸಬಿತಾ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು ಅಲ್ಲದೆ ಪ್ರಕರಣದ ಮರು ತನಿಖೆಗೆ ಆದೇಶಿಸಲು ಕೋರಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಬೇಲಾ ಎಂ.ತ್ರಿವೇದಿ ನೇತೃತ್ವದ ವಿಭಾಗಿಯ ಪೀಠ ಅರ್ಜಿಯನ್ನು ವಜಾ ಮಾಡಿ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.
ಮಂಗಳೂರಿನ ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣಪತಿ ಅವರು 2016 ಜುಲೈ 7 ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಕೊಡಗಿನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದ ಅವರು, ಅಂದಿನ ಗೃಹ ಸಚಿವ ಕೆ. ಜೆ. ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ. ಎಂ. ಪ್ರಸಾದ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನನ್ನ ಸಾವಿಗೆ ಈ ಮೂವರೇ ಕಾರಣ ಎಂದು ಅವರು ಹೇಳಿದ್ದರು.
ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿತ್ತು.ಅಂದು ಸಚಿವರಾಗಿದ್ದ ಕೆ ಜೆ ಚಾರ್ಜ್ ರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ
Previous Articleರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸಮರ.
Next Article ಕುಕ್ಕರ್ ಬಾಂಬ್ ಸ್ಫೋಟಕ್ಕೆ ಸಂಚು.