ಬೆಂಗಳೂರು, ಡಿ. 17: ಕೇರಳದಲ್ಲಿ ಕರೋನಾ (COVID Variant JN.1) ರುಪಾಂತರಿ ಜೆಎನ್.1 ಪತ್ತೆಯಾಗಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಮಾನ್ಯ ಸಣ್ಣ ನೀರಾವರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವಎನ್ ಎಸ್ ಭೋಸರಾಜು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಕೊಡಗು ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು. ಕೊಡಗು ಜಿಲ್ಲೆಗೆ ಗಡಿ ಹೊಂದಿಕೊಂಡಿರುವ ಕೇರಳ ರಾಜ್ಯದಲ್ಲಿ ರೂಪಾಂತರಿ ಕರೋನಾ ಪತ್ತೆಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು. ಜಿಲ್ಲೆಯ ಆರೋಗ್ಯ ಇಲಾಖೆಯು ಸನ್ನದ್ದವಾಗಿದ್ದು ಎಲ್ಲಾ ರೀತಿಯ ಪರಿಸ್ಥಿತಿಗಳನ್ನ ನಿಭಾಯಿಸಲು ಸಜ್ಜಾಗಿರಬೇಕು. ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆಯೂ ಕ್ರಮಗಳನ್ನ ಕೈಗೊಳ್ಳಬೇಕು.
ಕರೋನಾ ಪ್ರಕರಣಗಳು ಕಂಡುಬಂದಲ್ಲಿ ನಿಯಮಾನುಸಾರ ಅಗತ್ಯ ಚಿಕಿತ್ಸೆಯನ್ನು ಹಾಗೂ ಇನ್ನುಳಿದ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು. ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದೆ. ಈ ಹಿನ್ನಲೆಯಲ್ಲಿ ಈಗಿನಿಂದಲೇ ಅಗತ್ಯ ವ್ಯವಸ್ಥೆಗಳನ್ನ ಹಾಗೂ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.


2 ಪ್ರತಿಕ್ರಿಯೆಗಳು
Betano Casino https://betanogame.org/pl/ – stworzone dla wielkich zwycięzców. Odbierz swój bonus €500 już dziś i zanurz się w grach na żywo. Od slotów po sport – oferujemy ostateczny pakiet rozrywki.
Jogue no Mostbet e ganhe 125% extra + 325 free spins logo no primeiro depГіsito – https://mostbetpt.pro/ , Jogue no Mostbet e ganhe 125% extra + 325 free spins logo no primeiro depГіsito .