ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ಎಚ್.ಡಿ. ಕುಮಾರಸ್ವಾಮಿ ಸಾಹಿತಿಗಳಾದ ಬರಗೂರು, ಕುಂ.ವೀ ಸೇರಿದಂತೆ 61 ಜನರಿಗೆ ಜೀವ ಬೆದರಿಕೆ ಹಾಕಲಾಗಿದೆ.
ಜೀವ ಬೆದರಿಕೆ ಇರುವ ಅನಾಮಧೇಯ ಪತ್ರವೊಂದು ಸಾಹಿತಿ ಕುಂ. ವೀರಭದ್ರಪ್ಪ ಅವರ ಮನೆಗೆ ಪೋಸ್ಟ್ ಮಾಡಲಾಗಿದೆ. ಕೈಬರಹದಲ್ಲಿ ಬರೆದಿರುವ ಎರಡು ಪುಟಗಳಿದ್ದು ಪತ್ರ ಏಪ್ರಿಲ್ 6ರಂದು ವೀರಭದ್ರಪ್ಪನವರ ಕೊಟ್ಟೂರಿನಲ್ಲಿರುವ ಮನೆಗೆ ಬಂದಿದೆ.
ಭದ್ರಾವತಿಯಿಂದ ಪತ್ರ ಪೋಸ್ಟ್ ಮಾಡಲಾಗಿದೆ. ಆದರೆ, ಪತ್ರ ಬರೆದವರ ವಿವರ ಇಲ್ಲ. ‘ಸಹಿಷ್ಣು ಹಿಂದು’ ಎಂದಷ್ಟೇ ಪತ್ರದೊಳಗೆ ಉಲ್ಲೇಖಿಸಲಾಗಿದೆ.
61 ಜನ ಎಡಬಿಡಂಗಿ ಬುದ್ಧಿಜೀವಿ ಸಾಹಿತಿಗಳಿಗೇ.. ಹಿಜಾಬ್, ಮುಸ್ಲಿಮರ ಪರವಾಗಿ, ಭಗವದ್ಗೀತೆ ವಿರುದ್ಧವಾಗಿ ಸರ್ಕಾರಕ್ಕೆ ಪತ್ರ ಬರೆದಿದ್ದೀರಿ. ನೀವು ನಮ್ಮ ದೇಶದ ಅನ್ನ ಉಂಡು, ದೇಶದ ಗಾಳಿ ತೆಗೆದುಕೊಂಡು ದೇಶಕ್ಕೆ ದ್ರೋಹ ಬಗೆಯುತ್ತಿದ್ದೀರಿ. ನಿಮ್ಮ ಸರ್ವನಾಶ ನಿಶ್ಚಿತ. ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕೆ ಸಿದ್ಧರಾಗಿ. ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಿ’ ಸಹಿಷ್ಣು ಹಿಂದು ಎಂದು ಬೆದರಿಕೆ ಒಡ್ಡಲಾಗಿದೆ.