ಕರ್ನಾಟಕ : ಸಾಂಕ್ರಾಮಿಕ ಕೋವಿಡ್ ಕುರಿತಾಗಿ ಐಐಟಿ ಕಾನ್ಪುರದ ತಜ್ಞರು ಇಲ್ಲಿಯವರೆಗೆ ನೀಡಿರುವ ಎಲ್ಲಾ ಮುನ್ಸೂಚನೆ ನಿಜವಾಗಿದೆ ಜೂನ್ ಅಂತ್ಯದಲ್ಲಿ ರಾಜ್ಯಕ್ಕೆ ಕೊರೊನಾ 4 ನೇ ಅಲೆ ಬರಬಹುದು ಅಂತ ಎಚ್ಚರಿಕೆ ಕೊಟ್ಟಿದ್ದಾರೆ. 3 ಅಲೆಗಳಲ್ಲಿ ಇವ್ರು ಕೊಟ್ಟ ವರದಿ ನಿಜವಾಗಿದೆ ಹೀಗಾಗಿ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೂನ್ ವೇಳೆಗೆ ಅಥವ ಒಂದು ತಿಂಗಳ ಮುಂಚೆಯೇ 4ನೇ ಅಲೆ ಬರುವ ಸಾಧ್ಯತೆ ಇದೆ. ಈ ಅಲೆ ಜೂನ್ ನಲ್ಲಿ ಪ್ರಾರಂಭವಾಗಿ ಸೆಪ್ಟೆಂಬರ್- ಅಕ್ಟೋಬರ್ ವರೆಗೂ ಇರುವ ಸಾಧ್ಯತೆಯಿದೆ ಎಂದು ತಿಳಿಸಿದರು.
ಕೋವಿಡ್ ಬಂದು ಎರಡು ವರ್ಷ ಆಗಿದೆ. ಹೀಗಾಗಿ ನಾವು ಕೂಡಾ ಕೋವಿಡ್ ಜೊತೆ ಬದುಕಲು ಕಲಿಯಬೇಕು. ಮಾಸ್ಕ್, ಲಸಿಕಾಕರಣದ ಬಗ್ಗೆ ಜನರು ನಿಗಾವಹಿಸಬೇಕು. ಓಮಿಕ್ರಾನ್ ರೂಪಾಂತರ ಅಂತ ತಳಿ ಇದು ಅಂತ ಹೇಳಲಾಗ್ತಿದೆ. ಈ ಬಗ್ಗೆ ಲ್ಯಾಬ್ ವರದಿ ಕಳಿಸಲಾಗಿದೆ. ಎರಡು ಮೂರು ದಿನಗಳಲ್ಲಿ ವರದಿ ಬರಬಹುದು. ರಾಜ್ಯದಲ್ಲಿ 4 ನೇ ಅಲೆ ಬಂದಿದೆ ಅಂತ ಹೇಳಲು ಸಾಧ್ಯವಿಲ್ಲ. ಕೇಸ್ ನ ಪ್ರಮಾಣ ಇನ್ನು ಕಡಿಮೆ ಇದೆ ಎಂದು ಹೇಳಿದರು.
ರಾಜ್ಯದಲ್ಲಿ ಲಕ್ಷಾಂತರ ಡೋಸ್ ಲಸಿಕೆ ನಮ್ಮ ಬಳಿ ಇದೆ. ಲಸಿಕೆ ಕೊರತೆ ಇಲ್ಲ. ಜನರು ಲಸಿಕೆ ಕಡ್ಡಾಯವಾಗಿ ಪಡೆಯಬೇಕು. ಮಾಸ್ಕ್ ಕಡ್ಡಾಯವಾಗಿ ಹಾಕಬೇಕು. ಒಳಾಂಗಣದಲ್ಲಿ, ಜನರು ಇರೋ ಕಡೆ, ಗುಂಪು ಇರುವ ಕಡೆ ಮಾಸ್ಕ್ ಕಡ್ಡಾಯವಾಗಿ ಹಾಕಬೇಕು ಎಂದು ಹೇಳಿದರು.