ವ್ಯಾಟಿಕನ್:
ಕ್ರೈಸ್ತ ಧರ್ಮದ ಪರಮೋಚ್ಚ ಧರ್ಮಗುರು ಕ್ಯಾಥೋಲಿಕ್ ಚರ್ಚ್ ನ ಮುಖ್ಯಸ್ಥ
ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರದಂದು ನಿಧನರಾಗಿದ್ದಾರೆ.
ವಯೋ ಸಹಜ ಹಲವು ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ 88 ವರ್ಷ ವಯಸ್ಸಾಗಿತ್ತು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ ಎಂದು
ವ್ಯಾಟಿಕನ್‌ನ ಕ್ಯಾಮೆರ್ಲೆಂಗೊ ಕಾರ್ಡಿನಲ್ ಕೆವಿನ್ ಫಾರೆಲ್ ಅವರು ಘೋಷಣೆ ಮಾಡಿದ್ದಾರೆ
ಪೋಪ್ ಪ್ರಾನ್ಸಿಸ್ ನಿಧನಕ್ಕೆ ಜಗತ್ತಿನ ವಿವಿಧ ದೇಶಗಳ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಶ್ರದ್ಧಾಂಜಲಿ ಸಲ್ಲಿಸಿದ್ದು, ಪೋಪ್ ಫ್ರಾನ್ಸಿಸ್ ಅವರನ್ನು ಪ್ರಪಂಚದಾದ್ಯಂತ ಲಕ್ಷಾಂತರ ಜನರು ಕರುಣೆ, ನಮ್ರತೆ ಮತ್ತು ಆಧ್ಯಾತ್ಮಿಕ ಧೈರ್ಯದ ದೀಪಸ್ತಂಭವಾಗಿ ಯಾವಾಗಲೂ ಸ್ಮರಿಸುತ್ತಾರೆ. ಚಿಕ್ಕ ವಯಸ್ಸಿನಿಂದಲೂ, ಅವರು ಭಗವಂತ ಕ್ರಿಸ್ತನ ಆದರ್ಶಗಳನ್ನು ಅರಿತುಕೊಳ್ಳಲು ತಮ್ಮನ್ನು ತಾವು ಅರ್ಪಿಸಿಕೊಂಡರು. ಅವರು ಬಡವರು ಮತ್ತು ದೀನದಲಿತರಿಗೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದರು. ಬಳಲುತ್ತಿರುವವರಿಗೆ, ಅವರು ಭರವಸೆಯ ಮನೋಭಾವವನ್ನು ಬೆಳಗಿಸಿದರು. ಈ ಸಂದರ್ಭದಲ್ಲಿ ನಾನು ಅವರೊಂದಿಗಿನ ನನ್ನ ಭೇಟಿಗಳನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ ಮತ್ತು ಸಮಗ್ರ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಅವರ ಬದ್ಧತೆಯಿಂದ ಹೆಚ್ಚು ಪ್ರೇರಿತನಾಗಿದ್ದೆ. ಭಾರತದ ಜನರ ಮೇಲಿನ ಅವರ ವಾತ್ಸಲ್ಯ ಯಾವಾಗಲೂ ಸ್ಮರಿಸಲ್ಪಡುತ್ತದೆ ಎಂದು ತಿಳಿಸಿದ್ದಾರೆ
Previous Articleನಿವೃತ್ತ ಡಿಜಿಪಿ ಕೊಲೆ ಹೇಗಾಯ್ತು ಗೊತ್ತಾ?
Next Article ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್?