ಬೆಂಗಳೂರು: ಪಹೆಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಕೈಗೊಂಡ ಆಪರೇಷನ್ ಸಿಂಧೂರ್ ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ.
ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಸೈನ್ಯದ ಕಾರ್ಯಾಚರಣೆ ಬಗ್ಗೆ ನಮಗೆ ಯಾವಾಗಲೂ ಹೆಮ್ಮೆ ಇದೆ. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ಜವಾಹರ್ ಲಾಲ್ ನೆಹರು ಅವರ ಅವಧಿಯಲ್ಲಿ ಪಾಕಿಸ್ತಾನ ಮತ್ತು ಚೀನಾ ವಿರದ್ಧ ನಡೆದ ಯುದ್ದದಲ್ಲೂ ಕೂಡ ನಮ್ಮ ಸೇನೆ ತಕ್ಕ ಹೀಗೆ ಕಾರ್ಯಾಚರಣೆ ನಡೆಸಿದೆ. ಪುಲ್ವಾಮಾ ಘಟನೆ ಆದಾಗಲೇ ಇದನ್ನ ಮಾಡಬೇಕಿತ್ತು. ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.
ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಬೆಂಗಳೂರಿನಲ್ಲಿ ಸಂಭ್ರಮ ಮನೆ ಮಾಡಿದೆ. ಜಯನಗರದ 4ನೇ ಬ್ಲಾಕ್ನಲ್ಲಿನ ಗಣೇಶ್ ದೇವಸ್ಥಾನದಲ್ಲಿ ತೆಂಗಿನ ಕಾಯಿ ಒಡೆದು, ವಿಶೇಷ ಪೂಜೆ ಸಲ್ಲಿಸಿ ಸೇನೆಗೆ ಇನ್ನಷ್ಟು ಶಕ್ತಿ ಬರಲಿ ಎಂದು ಪ್ರಾರ್ಥಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜನರು “ಭಾರತೀಯ ಹೆಣ್ಣುಮಕ್ಕಳ ಸಿಂಧೂರ ಅಳಸಿದ ಕ್ರಿಮಿಗಳಿಗೆ ಆಪರೇಷನ್ ಸಿಂಧೂರ್ ಮೂಲಕ ಉತ್ತರ ಭಾರತೀಯ ಸೇನೆ ಉತ್ತರ ನೀಡಿದೆ. ಪಾಕಿಸ್ತಾನದ ಕ್ರಿಮಿಗಳು ನಾಶ ಆಗಬೇಕು” ಎಂದು ಹೇಳಿದರು.
Previous Articleಆಪರೇಷನ್ ಸಿಂಧೂರ
Next Article ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್
