Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತೇ ಜೈಲು !
    ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತೇ ಜೈಲು !

    vartha chakraBy vartha chakraಆಗಷ್ಟ್ 14, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.14-
    ಕನ್ನಡ ಸಿನಿಮಾರಂಗದಲ್ಲಿ ಬಾರಿ ನಿರೀಕ್ಷೆ ಮೂಡಿಸುವ ಬಿಗ್ ಬಜೆಟ್ ಸಿನಿಮಾ ಡೆವಿಲ್ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಈ ಸಿನಿಮಾದ ನಾಯಕ ನಟ ಜೈಲು ಪಾಲಾಗಿದ್ದಾರೆ.
    ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಅವರ ತಂಡಕ್ಕೆ ನೀಡಿದ ಜಾಮೀನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತಕ್ಷಣವೇ ಎಲ್ಲಾ ಆರೋಪಿಗಳನ್ನು ತಕ್ಷಣವೇ ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚಿಸಿದೆ.
    ಈ ಆದೇಶ ಹೊರ ಬಿದ್ದ ಕೆಲವೇ ಗಂಟೆಗಳಲ್ಲಿ ಪೊಲೀಸರು ನಟ ದರ್ಶನ್ ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು. ನಟ ದರ್ಶನ್ ತಾವೇ ಪೊಲೀಸರ ಮುಂದೆ ಶರಣಾಗುವುದಾಗಿ ಸಂದೇಶ ರವಾನಿಸಿದರು.
    ಕೊಲೆ ಪ್ರಕರಣದಲ್ಲಿ ಸಿಲುಕಿಸುವ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರಿದ್ದ
    ಸುಪ್ರೀಂ ಕೋರ್ಟ್ ನ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ.
    ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
    ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ, ಅವನು ಅಥವಾ ಅವಳು ಕಾನೂನಿಗಿಂತ ಮೇಲಲ್ಲ ಎಂಬ ಸಂದೇಶವನ್ನು ಇದು ನೀಡುತ್ತದೆ. ಯಾವುದೇ ಮಟ್ಟದಲ್ಲಿ ನ್ಯಾಯ ವಿತರಣಾ ವ್ಯವಸ್ಥೆಯು ಯಾವುದೇ ಬೆಲೆ ತೆತ್ತಾದರೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳಬೇಕು ಎಂಬ ಬಲವಾದ ಸಂದೇಶವನ್ನು ಇದು ಒಳಗೊಂಡಿದೆ. ಯಾವುದೇ ವ್ಯಕ್ತಿ ಕಾನೂನಿಗಿಂತ ಮೇಲಲ್ಲ ಅಥವಾ ಅದಕ್ಕಿಂತ ಕೆಳಗಿಲ್ಲ. ನಾವು ಅದನ್ನು ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ. ಎಲ್ಲಾ ಸಮಯದಲ್ಲೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ತಿಳಿಸಿದೆ.
    ಜಾಮೀನು ಮಂಜೂರು ಮತ್ತು ರದ್ದತಿ ಎರಡನ್ನೂ ನಾವು ಪರಿಗಣಿಸಿದ್ದೇವೆ. ಹೈಕೋರ್ಟ್ ಆದೇಶವು ಅಧಿಕಾರದ ಯಾಂತ್ರಿಕ ವ್ಯಾಯಾಮವನ್ನು ಪ್ರತಿಬಿಂಬಿಸುತ್ತದೆ ಎಂಬುದು ಸ್ಪಷ್ಟವಾಗಿದೆ. ಜಾಮೀನು ಮಂಜೂರು ವಿಚಾರಣೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು. ಗಂಭೀರ ದೌರ್ಬಲ್ಯಗಳಿಂದ ಬಳಲುತ್ತಿದೆ. ಬದಲಿಗೆ ಇದು ಯಾಂತ್ರಿಕ ವ್ಯಾಯಾಮವನ್ನು ಪ್ರತಿಬಿಂಬಿಸುತ್ತದೆ. ಮೇಲಾಗಿ, ಹೈಕೋರ್ಟ್ ವಿಚಾರಣೆಯ ಪೂರ್ವ ಹಂತದಲ್ಲಿ ಪರೀಕ್ಷೆಯನ್ನು ಕೈಗೊಂಡಿತು. ವಿಚಾರಣಾ ನ್ಯಾಯಾಲಯ ಮಾತ್ರ ಸೂಕ್ತ ವೇದಿಕೆಯಾಗಿದೆ ಪರಿಗಣಿಸದೆ ಜಾಮೀನು ನೀಡುವುದು. ಸುಸ್ಥಾಪಿತ ಆರೋಪಗಳು, ಪೂರ್ವಭಾವಿ ಸಾಕ್ಷ್ಯಗಳೊಂದಿಗೆ ಸೇರಿಕೊಂಡು ಜಾಮೀನು ರದ್ದತಿಯನ್ನು ಬಲಪಡಿಸುತ್ತವೆ. ನಾವು ಅಸಾಧಾರಣ ನ್ಯಾಯವ್ಯಾಪ್ತಿಯನ್ನು ಚಲಾಯಿಸಲು ತೃಪ್ತರಾಗಿದ್ದೇವೆ ಎಂದು ಹೇಳಿದೆ.
    ನಿಖರ ಆರೋಪಗಳು ಮತ್ತು ವಿಧಿವಿಜ್ಞಾದನ ಪ್ರಯೋಗಾಲಯದ ಹಲವು ಸಾಕ್ಷ್ಯಗಳು ಜಾಮೀನು ರದ್ದುಗೊಂಡಿರುವುದೇಕೆ ಎಂಬುದನ್ನು ಸಮರ್ಥಿಸುತ್ತವೆ. ಈ ಪ್ರಕರಣದ ವಿಚಾರಣೆ ನಡೆಸಲು ವಿಚಾರಣಾ ನ್ಯಾಯಾಲಯವೇ ಸೂಕ್ತ. ಆರೋಪಿಗಳಿಗೆ ನೀಡಿರುವ ಜಾಮೀನನ್ನು ರದ್ದು ಮಾಡಲಾಗಿದೆ’ ಎಂದು ಪೀಠ ಹೇಳಿದೆ.
    ಆರೋಪಿಯು ಎಷ್ಟೇ ದೊಡ್ಡವರಾಗಿದ್ದರೂ ಕಾನೂನಿಗಿಂತ ದೊಡ್ಡವರಲ್ಲ ಎಂಬ ಸಂದೇಶವನ್ನು ಈ ಆದೇಶ ಸಾರುತ್ತದೆ ಎಂದು ನ್ಯಾ. ಜೆ.ಬಿ. ಪಾರ್ದೀವಾಲ ಹೇಳಿದ್ದಾರೆ.
    ಕೊಲೆಯಾದ ರೇಣುಕಸ್ವಾಮಿ ನಟ ದರ್ಶನ್‌ ಆಪ್ತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂಬ ಆರೋಪ ಪವಿತ್ರಾ, ದರ್ಶನ್‌ ಹಾಗೂ ಇತರರ ಮೇಲಿದೆ.
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಹಾಗೂ ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌, 2024ರ ಡಿಸೆಂಬರ್‌ 13ರಂದು ಜಾಮೀನು ಮಂಜೂರು ಮಾಡಿತ್ತು.

    ಕರ್ನಾಟಕ ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ ಬೆಂಗಳೂರು ಸರ್ಕಾರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ
    Next Article ಸಿಎಂ ಗೆ ದೇವನೂರು ಮಹಾದೇವ ಪತ್ರ
    vartha chakra
    • Website

    Related Posts

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025

    ಇವರಿಗೆ ಬೆಂಗಳೂರು ಬೇಡವಂತೆ.

    ಸೆಪ್ಟೆಂಬರ್ 18, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಕಾಮುಕ ಯೋಗಗುರು ಅರೆಸ್ಟ್.

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಇವರಿಗೆ ಬೆಂಗಳೂರು ಬೇಡವಂತೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • backlink building ರಲ್ಲಿ Alcoholಗೆ‌ Full‌ ಡಿಮಾಂಡ್
    • Seo Backlinks ರಲ್ಲಿ ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • Diplomi_qbEa ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Latest Kannada News

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    9ನೇ ಕ್ಲಾಸ್ ವಿದ್ಯಾರ್ಥಿ ಬ್ಯಾಗಿನಲ್ಲಿ ಕಾಂಡೊಮ್, ಸಿಗರೇಟ್, ಆಲ್ಕೋಹಾಲ್ #varthachakra#medicalcheckup #parents
    Subscribe