ಬೆಂಗಳೂರು
ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ.
ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.
ಇದೇ ವೇಳೆ ಚಿಕನ್ ಕಬಾಬ್ ಗಳಲ್ಲೂ ಕೃತಕ ಬಣ್ಣಗಳ ಬೆರಸುವಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು.
ಕಳಪೆಗುಣಮಟ್ಟದ ಆಹಾರ ಸೇವನೆ ಇತ್ತಿಚೆಗೆ ಜನರ ಆರೋಗ್ಯದ ಮೇಲೆ ತೀವ್ರ ಹಾನಿಯನ್ನುಂಟುಮಾಡುತ್ತಿದೆ. ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದ್ದರು.
ಸಚಿವರ ಸೂಚನೆಯ ಮೇರೆಗೆ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಯಿತು. ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿದುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.
ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಆದೇಶ ಉಲ್ಲಂಘಿಸಿದರೆ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ
ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
Previous Articleಪೋಕ್ಸೋ ಪ್ರಕಣರಣ:ದೇವರ ಮೊರೆ ಹೊಕ್ಕ ಯಡಿಯೂರಪ್ಪ.
Next Article ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
6 ಪ್ರತಿಕ್ರಿಯೆಗಳು
аттестация соут в москве специальная оценка условий труда на рабочем месте
Вопросы и ответы: можно ли быстро купить диплом старого образца?
зарегистрироваться vavada предоставляет уникальную возможность погрузиться в мир азартных игр. здесь вы сможете войти в систему на надёжной платформе vavada. получите доступ к специальным предложениям через личный кабинет.
Покупка школьного аттестата с упрощенной программой: что важно знать
Легальные способы покупки диплома о среднем полном образовании
Как избежать рисков при покупке диплома колледжа или ПТУ в России