ಬೆಂಗಳೂರು,ಮೇ.19- ಕಿರುತೆರೆ ನಟಿ ಚೇತನಾ ರಾಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ಯಾಟ್ ಸರ್ಜರಿ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಗೆ ಬೀಗ ಜಡಿದು, ಆಸ್ಪತ್ರೆಯ ವೈದ್ಯರು ಹಾಗು ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.
ಸಾವಿನ ಘಟನೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಆರೋಗ್ಯ ಇಲಾಖೆಯು ಡಾ.ಶೆಟ್ಟಿಗೆ ನೋಟಿಸ್ ಕೊಟ್ಟು ಆಸ್ಪತ್ರೆಯನ್ನು ಬಂದ್ ಮಾಡಿಸಲಾಗಿದೆ. ಮಗಳ ಶಂಕಾಸ್ಪದ ಸಾವಿನ ಸಂಬಂಧ ಚೇತನಾ ತಂದೆ ವರದರಾಜ್ ನೀಡಿರುವ ದೂರಿನ ಅನ್ವಯ ಸಾವಿನ ರಹಸ್ಯ ಭೇದಿಸಲು ಮುಂದಾಗಿದ್ದ ಸುಬ್ರಹ್ಮಣ್ಯ ನಗರ ಪೊಲೀಸರು, ಆಸ್ಪತ್ರೆಯ ಸಾಹೇಬ್ ಗೌಡ ಶೆಟ್ಟಿ ಸೇರಿದಂತೆ ನಾಲ್ವರ ವಿರುದ್ಧ ನೋಟಿಸ್ ಜಾರಿಗೊಳಿಸಿದ್ದಾರೆ. ಇಂದು ಮಧ್ಯಾಹ್ನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಏನಿದು ಪ್ರಕರಣ:
ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್ ಕೆಲ ದಿನಗಳ ಹಿಂದಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು. ಅಬ್ಬಿಗೆರೆಯಲ್ಲಿ ವಾಸವಿರುವ ನಟಿಯ ಪೋಷಕರು, ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದರು.
ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎಂದು ಹೇಳಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರು ಇಂದು ವಿಚಾರಣೆಗೆ ಹಾಜರಾಗುವಂತೆ ವೈದ್ಯರಿಗೆ ನೋಟಿಸ್ ನೀಡಿದ್ದಾರೆ.
Previous Articleಮತ್ತೆ ಗೃಹಬಳಕೆ, ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ
Next Article ರವಿ ಚೆನ್ನಣ್ಣನವರ್ ತಮ್ಮನ ವಿರುದ್ಧ FIR