ಬೆಂಗಳೂರು
ನಿಗಧಿತ ಆದಾಯ ಮೂಲ ಮೀರಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹೊಂದಿದ್ದಾರೆ ಎಂಬ ಆರೋಪ ಪ್ರಕರಣದಲ್ಲಿ ಸಿಲುರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ನಟಿ ರಾಧಿಕಾ ಕುಮಾರಸ್ವಾಮಿ 2 ಕೋಟಿ ರೂ ಹಣಕಾಸು ನೆರವು ನೀಡಿದ್ದಾರೆ.
ಜಮೀರ್ ಅಹ್ಮದ್ ಖಾನ್ ವಿರುದ್ಧ ಕೇಳಿ ಬಂದಿರುವ ಆರೋಪ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ತನಿಖಾ ತಂಡ ಅವರಿಂದ ವಶಪಡಿಸಿಕೊಂಡಿರುವ ದಾಖಲೆಗಳಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ಹಣ ನೀಡಿರುವ ವಿವರಣೆ ಇದೆ.
ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಬರುವಂತೆ ರಾಧಿಕಾ ಕುಮಾರಸ್ವಾಮಿ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದರು. ಅದರಂತೆ ರಾಧಿಕಾ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.
ಜಮೀರ್ ಅಹ್ಮದ್ ಖಾನ್ಗೆ ಹಣ ಕೊಟ್ಟಿರುವ ಬಗ್ಗೆ ಲೋಕಾಯುಕ್ತ ವಿಚಾರಣೆ ವೇಳೆ ರಾಧಿಕಾ ಕುಮಾರಸ್ವಾಮಿ ಹೇಳಿಕೆ ದಾಖಲಿಸಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಜಮೀರ್ ಅಹಮದ್ ಖಾನ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ 2019 ರಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಆಗ ಜಮೀರ್ಗೆ ಹಣಕಾಸು ನೆರವು ಅಥವಾ ನೀಡಿದ ವಿವರಗಳನ್ನು ಇಡಿ ಸಂಗ್ರಹಿಸಿತ್ತು. ರಾಧಿಕಾ ಕುಮಾರಸ್ವಾಮಿ ಕೂಡ ಹಣ ನೀಡಿದ್ದರು ಎಂಬುದು ತಿಳಿದು ಬಂದಿತ್ತು. ಆಗ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದು, ಜಮೀರ್ ಸಚಿವರಾಗಿದ್ದರು.
ಜಮೀರ್ ವಿರುದ್ಧ ಭ್ರಷ್ಟಾಚಾರ ವಿಗ್ರಹದಳ (ಎಸಿಬಿ) ಪ್ರಕರಣ ದಾಖಲಿಸಿತ್ತು. ಬಳಿಕ ರಾಜ್ಯದಲ್ಲಿ ಎಸಿಬಿ ರದ್ದುಗೊಂಡಿದ್ದರಿಂದ ಆ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಮುಂದುವರಿಸಿತ್ತು. ಅದರಂತೆ ತನಿಖೆಗೆ ಹಾಜರಾಗುವಂತೆ ರಾಧಿಕಾ ಕುಮಾರಸ್ವಾಮಿಗೆ ನೋಟಿಸ್ ನೀಡಲಾಗಿತ್ತು.
ನಟಿ ರಾಧಿಕಾ ವಿವರಣೆ:
2012ರಲ್ಲಿ ಶಮಿಕಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಯಶ್ ಮತ್ತು ರಮ್ಯಾ ಅಭಿನಯದ ಚಿತ್ರ ನಿರ್ಮಾಣ ಮಾಡಿದ್ದು ಅದರ ಯಶಸ್ಸು ಮತ್ತು ಸ್ಯಾಟಲೈಟ್ ಹಕ್ಕಿನಿಂದ ದೊರೆತ ಲಾಭಾಂಶದಲ್ಲಿ ಎರಡು ಕೋಟಿ ರೂಗಳನ್ನು ಸಚಿವರಿಗೆ ನೀಡಿದ್ದಾಗಿ ರಾಧಿಕಾ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆ ವೇಳೆ ತಿಳಿಸಿದ್ದಾರೆ
ರಾಧಿಕಾ ಕುಮಾರಸ್ವಾಮಿ ಹೇಳಿಕೆ ದಾಖಲಿಸಿಕೊಂಡಿರುವ ಲೋಕಾಯುಕ್ತರು, ಪೂರಕ ದಾಖಲೆಗಳನ್ನು ಒದಗಿಸುವಂತೆ ಸೂಚಿಸಿದ್ದಾರೆ.ಮತ್ತೊಂದೆಡೆ, ರಾಧಿಕಾ ಕುಮಾರಸ್ವಾಮಿ ಮಾತ್ರವಲ್ಲದೆ ಇನ್ನೂ ಹಲವರಿಂದ ಜಮೀರ್ ಹಣ ಪಡೆದಿದ್ದರು ಎನ್ನಲಾಗಿದೆ. ಜೆಡಿಎಸ್ ಮುಖಂಡ ಕುಪೇಂದ್ರ ರೆಡ್ಡಿ ಸೇರಿದಂತೆ ಅನೇಕರಿಂದ ಜಮೀರ್ ಅಹ್ಮದ್ ಖಾನ್ ಹಣ ಪಡೆದಿದ್ದರು ಎನ್ನಲಾಗಿತ್ತು. ಈ ವಿಚಾರವಾಗಿ ಲೋಕಾಯುಕ್ತ ತನಿಖೆ ಮುಂದುವರಿದಿದೆ
ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?
Previous ArticlePG ಗಳಲ್ಲಿರುವ ಮಹಿಳೆಯರೇ ಹುಷಾರ್ !
Next Article ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !