ಬೆಂಗಳೂರು,ಸೆ.19-ಲೈಂಗಿಕ ನಿಂದನೆ ಆರೋಪ ಎದುರಿಸುತ್ತಿರುವ ಟಾಲಿವುಡ್ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ನನ್ನು ನಗರದಲ್ಲಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಬಂಧಿಸಿದ್ದಾರೆ.
ಜಾನಿ ಮಾಸ್ಟರ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ (ಪೋಸ್ಕೋ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಿ ವಿಚಾರಣೆ ನಡೆಸಲಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗಾಗಿ ಹೈದರಾಬಾದ್ ಪೊಲೀಸರು ನಾಲ್ಕು ವಿಶೇಷ ತಂಡಗಳು (ಎಸ್‌ಒಟಿ) ರಚಿಸಲಾಗಿತ್ತು. ಇದರಲ್ಲಿ ಒಂದು ತಂಡ ಜಾನಿ ಮಾಸ್ಟರ್ ಬೆಂಗಳೂರಿನಲ್ಲಿದ್ದ ಮಾಹಿತಿ ಪಡೆದು ವಶಕ್ಕೆ ಪಡೆದಿದ್ದಾರೆ.
ಜಾನಿ ಮಾಸ್ಟರ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ (ಪೋಸ್ಕೋ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಘಟನೆ ನಡೆದಾಗ ಸಂತ್ರಸ್ತೆ ಅಪ್ರಾಪ್ತ ವಯಸ್ಕಳಾಗಿದ್ದಳು ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಸಂತ್ರಸ್ತೆ ಆಯೋಗವನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ ಎಂದು ತೆಲಂಗಾಣ ಮಹಿಳಾ ಆಯೋಗ ತಿಳಿಸಿದೆ. ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ನೃತ್ಯ ಸಂಯೋಜಕಿಯ ಮೇಲೆ ಪದೇ ಪದೇ ಅತ್ಯಾಚಾರ, ಕಿರುಕುಳ ಮತ್ತು ಹಲ್ಲೆ ಮಾಡಿದ ಆರೋಪವಿದೆ. ಮತ್ತೊಂದೆಡೆ, ತೆಲುಗು ಫಿಲ್ಡ್ ಚೇಂಬರ್ ಆಫ್ ಕಾಮರ್ಸ್ (ಟಿಎಫ್‌ಸಿಸಿ) ಕೂಡ ಪ್ರಕರಣವನ್ನು ಪರಿಶೀಲಿಸುತ್ತಿದೆ.
ಜಾನಿ ಮಾಸ್ಟರ್ ದೇಶವನ್ನು ತೊರೆಯಲು ಯೋಜಿಸುತ್ತಿದ್ದ ಎನ್ನಲಾಗಿದೆ.ಆತ ಉತ್ತರ ಭಾರತಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಸುಳಿವಿನ ಮೇರೆಗೆ ಪೊಲೀಸರು ಜಾನಿ ಮಾಸ್ಟರ್‌ನನ್ನು ಬಂಧಿಸಲಾಗಿದೆ.
Previous Articleಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
Next Article ಲೋಕಾಯುಕ್ತಕ್ಕೆ ಏನಾಗಿದೆ.?