ಬೆಂಗಳೂರು,ಸೆ.30-
ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹೊರವಲಯದ ಜಿಗಣಿಯ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಪ್ರಜೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ಆಧಾರದ ಮೇಲೆ ಕಳೆದ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಪಾಕಿಸ್ತಾನದ ಪ್ರಜೆಯ ಜೊತೆಗೆ ನಾಲ್ವರು ವಿದೇಶಿ ಪ್ರಜೆಗಳನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಪಾಕಿಸ್ತಾನದಲ್ಲಿ ಧರ್ಮದ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಿತ್ತು.ಇದರಿಂದ ಬೇಸರಗೊಂಡ ಬಂಧಿತ ಆರೋಪಿಯು ಪಾಕಿಸ್ತಾನ ತೊರೆದು ಬಾಂಗ್ಲಾದೇಶದ ಢಾಕಾದಲ್ಲಿ ನೆಲಸಿದ್ದ.ಅಲ್ಲಿ ಓರ್ವ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದಾನೆ. ಬಳಿಕ ಈ ಪಾಕಿಸ್ತಾನ ಪ್ರಜೆ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ 2014ರಲ್ಲಿ ಅಕ್ರಮವಾಗಿ ದೆಹಲಿಗೆ ಬಂದಿದ್ದಾನೆ. ಅಲ್ಲಿ, ಸ್ಥಳೀಯ ವ್ಯಕ್ತಿಯ ನೆರವಿನಿಂದ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದಾನೆ.
ಬಳಿಕ, 2018ರಲ್ಲಿ ಕುಟುಂಬ ಸಮೇತ ಆನೇಕಲ್ ತಾಲೂಕಿನ ಜಿಗಣಿಗೆ ಬಂದು ವಾಸವಾಗಿದ್ದಾನೆ. ಈತನ ವಿಚಾರ ತಿಳಿದ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು, ಜಿಗಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ, ಜಿಗಣಿ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿ, ಕುಟುಂಬ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿಯಾಗಿರುವ ಪಾಕ್ ಪ್ರಜೆಯು ಪತ್ನಿ, ಇಬ್ಬರು ಮಕ್ಕಳ ಜತೆ ವಾಸವಿದ್ದ ಆತನ ಪತ್ನಿ ಬಾಂಗ್ಲಾದೇಶದವಳಾಗಿದ್ದಾಳೆ.
ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಸಂಗ್ರಹಿಸಿದ್ದರು. ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಜಿಗಣಿ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Previous Articleಲಂಚ ಕೇಳಿದರೆ ಡಿಸಿಎಂ ಗೆ ಪತ್ರ ಬರೆಯಿರಿ.
Next Article ಕಾಲು ತುಳಿದಿದ್ದಕ್ಕೆ ಕೊಲೆ.