ಬೆಂಗಳೂರು,ಸೆ.26-
ಬೇಲೀಯೇ ಎದ್ದು ಹೊಲ ಮೇಯ್ದ ನಾಣ್ನುಡಿ ಸತ್ಯವಾದ ಘಟನೆ ಇದು. ಅಕ್ರಮವೆಸಗಿದ ಆರೋಪಿಗಳಿಂದಲೇ ಹಣ ಪೀಕಿದ ತನಿಖಾಧಿಕಾರಿ ಸಸ್ಪೆಂಡ್ ಆಗಿದ್ದಾರೆ.
ಭೋವಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂ. ಅಕ್ರಮ ಆರೋಪ ಪ್ರಕರಣದ ಸಂಬಂಧಿಸಿ ತನಿಖಾಧಿಕಾರಿ ಎ.ಡಿ.ನಾಗರಾಜ್ ರನ್ನು ಅಮಾನತು ಮಾಡಿ ಸಿಐಡಿ ಪೊಲೀಸ್ ಮಹಾ ನಿರ್ದೇಶಕ ಎಂಎ ಸಲೀಂ ಅವರು ಆದೇಶ ಹೊರಡಿಸಿದ್ದಾರೆ.
ಭೋವಿ ನಿಗಮದಲ್ಲಿ ಕೋಟ್ಯಂತರ ಹಣ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸರ್ಕಾರ ಸಿಐಡಿ ತನಿಖೆಗೆ ಆದೇಶ ಮಾಡಿತ್ತು.
ಈ ಸಂಬಂಧ ಲೀಲಾವತಿ ಸೇರಿ ಹಲವು. ಆರೋಪಿಗಳನ್ನು ಬಂಧಿಸಿ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು.
ತನಿಖೆ ವೇಳೆ ತನಿಖಾಧಿಕಾರಿ ನಾಗರಾಜಪ್ಪ ಅವರು ಆರೋಪಿಗಳಿಂದ ಹಣ ಪಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಯಾಗಿದ್ದ ಎ.ಡಿ.ನಾಗರಾಜ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.
2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲಕೊಡಿಸುವುದಾಗಿ ಹೇಳಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿತ್ತು .
ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಸುಬ್ಬಪ್ಪ, ‘ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾ., ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಈ ಬಗ್ಗೆ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧೀಕ್ಷಕ ಸುಬ್ಬಪ್ಪನನ್ನ ಬಂಧಿಸಿದ್ದರು.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

