ಮಂಗಳೂರು,ಆ.21-
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣ ಸೇರಿದಂತೆ ಇತರೆ ಅಕ್ರಮ ಆರೋಪಗಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ತಿಮರೋಡಿ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದು ಇವುಗಳಿಗೆ ಜೀವ ಕೊಡಲು ಪೊಲೀಸರು ಮುಂದಾಗಿದ್ದಾರೆ. ಸದ್ಯ ಸಂಘ ಪರಿವಾರ ನಾಯಕ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧದ ಟೀಕೆಯ ಹಿನ್ನೆಲೆಯಲ್ಲಿ ತಿಮರೋಡಿ
ಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.
ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿಯ ನಿವಾಸಕ್ಕೆ ತೆರಳಿಜ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ತಿಮರೋಡಿ ವಿರುದ್ಧ ದೂರು ಸಲ್ಲಿಸಲಾಗಿದೆ.
ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಅವರು ದೂರು ನೀಡಿದ್ದರು. ಈ ನಿಟ್ಟಿನಲ್ಲಿ ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಇನ್ನು ಆತನನ್ನು ವಿಚಾರಣೆಗೆ ಕರೆದೊಯ್ಯಲು ಪೊಲೀಸರು ಆಗಮಿಸಿದ ವೇಳೆ ಹೈಡ್ರಾಮಾ ನಡೆಯಿತು.ಆತನ ಬೆಂಬಲಿಗರು ಪೊಲೀಸ್ ಮತ್ತು ಬಿಜೆಪಿ ವಿರುದ್ಧ ಘೋಷಣೆ ಮೊಳಗಿಸಿದರು.
ಪ್ರಕರಣದ ವಿವರ:
ಕಳೆದ ಆಗಸ್ಟ್ 16ರಂದು ಫೇಸ್‌ಬುಕ್ ಪೇಜ್‌ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಅವರು ದೂರು ನೀಡಿದ್ದಾರೆ.
ಅಕ್ರಮ ಶವ ಹೂಳಿದ್ದ:
ಈ ನಡುವೆ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧವೇ ಅಕ್ರಮವಾಗಿ ಶವ ಹೂತಿಟ್ಟ ಆರೋಪ ಕೇಳಿಬಂದಿದೆ. ಈ ಕುರಿತು ಭಾಸ್ಕರ್ ನಾಯ್ಕ ಎಂಬುವವರು ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.
2018ರಲ್ಲಿ ಉಜಿರೆಯ ಬಿಲ್ಲರೋಡಿ ಎಂಬಲ್ಲಿ ಸೋಂಪ ಅಲಿಯಾಸ್ ಬಾಲಕೃಷ್ಣ ಗೌಡ ಎಂಬ ವ್ಯಕ್ತಿಯ ಶವವನ್ನು ಜೇಸಿಬಿ ಯಂತ್ರದ ಮೂಲಕ ಮಣ್ಣಿನಡಿ ಹೂತಿರುವ ಅನುಮಾನ ವ್ಯಕ್ತವಾಗಿದ್ದು, ಇದರ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಕೈವಾಡವಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ದೂರುದಾರ ಭಾಸ್ಕರ್ ನಾಯ್ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದ ಸೂಕ್ತ ಸಾಕ್ಷ್ಯಗಳನ್ನು ನಾನು ತನಿಖಾ ಸಮಯದಲ್ಲಿ ಎಸ್‌ಐಟಿಗೆ ಒದಗಿಸುತ್ತೇನೆ. ಘಟನೆಯ ಸಮಯದಲ್ಲಿ ನಡೆದಿದ್ದ ಅಕ್ರಮ ಚಟುವಟಿಕೆಗಳ ಬಗ್ಗೆ ಸಾಕ್ಷ್ಯಾಧಾರಗಳಿವೆ ಎಂದು ತಿಳಿಸಿದ್ದಾರೆ.
ಅಕ್ರಮ ಮರ ಸಾಗಾಣೆ:
ಮತ್ತೊಂದೆಡೆ ಮಹೇಶ್ ಶೆಟ್ಟಿ ತಿಮರೋಡಿ ಅವರು ಸರ್ಕಾರಿ ಜಾಗದಲ್ಲಿ ಮರಗಳನ್ನು ಕಡಿದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಒಬ್ಬ ವ್ಯಕ್ತಿಯನ್ನು ಮಣ್ಣಿನಡಿಗೆ ಹಾಕಿ ಹೂತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಘಟನೆಯನ್ನು ಸ್ಥಳೀಯರೂ ನೋಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಿಲ್ಲರೋಡಿ ಎಂಬ ಪ್ರದೇಶದಲ್ಲಿ ಉತ್ಪನನ ನಡೆಸಿದರೆ ಶವ ಹೊರ ಬರುವ ಸಾಧ್ಯತೆ ಇದೆ. ಆದ್ದರಿಂದ ತಕ್ಷಣ ಕ್ರಮ ಕೈಗೊಂಡು ಸತ್ಯಾಂಶ ಬಹಿರಂಗಪಡಿಸಬೇಕು ಎಂದು ದೂರುದಾರರು, ಎಸ್‌ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
Previous Articleಕ್ಯಾನ್ಸರ್ ಪೇಷಂಟ್ ಮಾಡಿದ ಘನ ಕಾರ್ಯ
Next Article ಮಹಿಳಾ ವಿಶ್ವಕಪ್ ಕ್ರಿಕೆಟ್ ಗೆ ಬೆಂಗಳೂರು ಪೊಲೀಸ್ ಷರತ್ತು