ಬೆಂಗಳೂರು, ಮೇ.7 -ಒಂಟಿಯಾಗಿ ಒಡಾಡುವವರನ್ನು ಅಡ್ಡಗಟ್ಟಿ ಬೆದರಿಸಿ ನಗದು ಚಿನ್ನ ಮೊಬೈಲ್ ಸುಲಿಗೆ ಮಾಡುತ್ತಿದ್ದ ಐವರು ದರೋಡೆಕೋರರನ್ನು ಬಂಧಿಸುವಲ್ಲಿ ಅನ್ನಪೂರ್ಣೇಶ್ವರಿ ನಗರ ಪೋಲೀಸರು ಯಶಸ್ವಿಯಾಗಿದ್ದಾರೆ.
ವೆಂಕಟೇಶ್, ಪ್ರಕಾಶ್, ಹನುಮಂತ್ , ಶ್ರೀಶೈಲ್ ಹಾಗು ಅವಿನಾಶ್ ಬಂಧಿತ ದರೋಡೆಕೋರರಾಗಿದ್ದಾರೆ ಎಂದು ಡಿಸಿಪಿ ಡಾ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಬಂಧಿತರಿಂದ 8 ಲಕ್ಷ ಮೌಲ್ಯದ 20 ಗ್ರಾಂ ಚಿನ್ನದ ಸರ, ವಿವಿಧ ಕಂಪನಿಯ 4 ಮೊಬೈಲ್ ಫೋನ್‍ಗಳು ಹಾಗು17 ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಕಳೆದ ಏ.9 ರಂದು ರಾತ್ರಿ 8-30 ರ ವೇಳೆ ಅನ್ನಪೂರ್ಣೇಶ್ವರಿನಗರದ ತಮ್ಮ ಮನೆಯ ಪಕ್ಕದ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ನಡೆದು ಕೊಂಡು ಹೋಗುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಬಂಧಿತ ಆರೋಪಿಗಳಲ್ಲಿ ಓರ್ವ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದು ಈ ಬಗ್ಗೆ ಅನ್ನಪೂರ್ಣೇಶ್ವರಿನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಲೋಹಿತ್ ಬಿ.ಎನ್ ಮತ್ತವರ
ಸಿಬ್ಬಂದ ಎರಡು ದಿನಗಳ ಹಿಂದೆ ದರೋಡೆಗೆ ಸಂಚು ರೂಪಿಸುತ್ತಿದ್ದ ಐವರನ್ನು ಬಂಧಿಸಿ ಅವರ ಪೈಕಿ ಇಬ್ಬರು ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ, ಆರೋಪಿಗಳು ಅನ್ನಪೂರ್ಣೇಶ್ವರಿನಗರ, ಕಾಮಾಕ್ಷಿಪಾಳ್ಯ, ಸುಬ್ರಹ್ಮಣ್ಯಪುರ, ಜ್ಞಾನಭಾರತಿ, ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ
ಸರ ಅಪಹರಣ, ಮೊಬೈಲ್ ಕಳವು ಮತ್ತು ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದನ್ನು ಬಾಯ್ಬಿಟ್ಟಿದ್ದಾರೆ ಎಂದರು.