Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಿನೇಶ್ ಗುಂಡೂರಾವ್ ಗೆ ಲೋಕಾಯುಕ್ತ ನೋಟಿಸ್.
    ಸುದ್ದಿ

    ದಿನೇಶ್ ಗುಂಡೂರಾವ್ ಗೆ ಲೋಕಾಯುಕ್ತ ನೋಟಿಸ್.

    vartha chakraBy vartha chakraಸೆಪ್ಟೆಂಬರ್ 17, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಸಚಿವ ಜಮೀರ್ ಅಹ್ಮದ್‌ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
    ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿದ್ದ ದಿನೇಶ್ ಗುಂಡೂರಾವ್‌ಗೆ ನೋಟಿಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ.
    ನೋಟಿಸ್ ಬೆನ್ನಲ್ಲೇ ದಿನೇಶ್ ಗುಂಡೂರಾವ್ ದಾಖಲೆ ಕ್ರೋಢೀಕರಿಸಲು ಕಾಲಾವಕಾಶ ಕೋರಿದ್ದಾರೆ.ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್‌ಗೆ 2.5 ಕೋಟಿ ರೂ. ನೀಡಿದ್ದ ವಿಚಾರವಾಗಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಈ ಪ್ರಕರಣದಲ್ಲಿ ಈಗಾಗಲೇ ರಾಧಿಕಾ ಕುಮಾರಸ್ವಾಮಿ ಹಾಗೂ ಗುಜರಿ ಬಾಬು ವಿಚಾರಣೆ ನಡೆಸಲಾಗಿದೆ.
    ಏನಿದು ಪ್ರಕರಣ:
    2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜೊತೆ ನಂಟು ಹೊಂದಿದ್ದ ಆರೋಪದ ಮೇರೆಗೆ ಜಮೀರ್ ಅಹಮದ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿತ್ತು.
    ಇಡಿ ವರದಿಯ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಅಂದು ಅಸ್ತಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ತನಿಖೆಯೂ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರ ವಿಚಾರಣೆ ನಡೆಸುತ್ತಿದ್ದಾರೆ.
    ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು.
    ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್‌ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್ ಅಹ್ಮದ್ ಅವರಿಗೆ 2.5 ಕೋಟಿ ರೂಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿರುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು.

    Verbattle
    Verbattle
    Verbattle
    ಆರೋಗ್ಯ ಇಡಿ ಚಲನಚಿತ್ರ ಬೆಂಗಳೂರು ಮೈ ವ್ಯವಹಾರ ಸರ್ಕಾರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧು ಎಂದ ಹೈಕೋರ್ಟ್.
    Next Article ಸುತ್ತಿಕೊಳ್ಳುತ್ತಿದೆ ಮುಡಾ ಹಗರಣದ ಉರುಳು.
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Glennhof ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • LinwoodGah ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.