ಬೆಂಗಳೂರು : ದೇಶದ ರೈತರ ಪರವಾಗಿ ಹೋರಾಟ ಮಾಡಿದ ವಿಚಾರವಾಗಿ ನಮ್ಮ ಮೇಲೆ ಸರ್ಕಾರ ದೂರು ದಾಖಲಿಸಿದೆ.ನಮಗೆ ತೊಂದರೆ ನೀಡಿ, ಕೋರ್ಟ್ ಗೆ ಅಲೆಸಬೇಕು ಎಂದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪಾದಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಸಚಿವ ಈಶ್ವರಪ್ಪ ಹಾಗೂ ಸಂಶ ರಾಘವೇಂದ್ರ ಅವರು ಸೆಕ್ಷನ್ 144 ಉಲ್ಲಂಘನೆ ಮಾಡಿದ್ದರಲ್ಲ, ಅಲ್ಲಿ ನ್ಯಾಯಾಲಯ, ಕಾನೂನು ಇರಲಿಲ್ಲವೇ? ಅಲ್ಲಿ ಕಾನೂನು ಉಲ್ಲಂಘನೆ ಆಗಿಲ್ಲವೇ? ಅವರ ವಿರುದ್ದ ಕ್ರಮ ಯಾಕಿಲ್ಲ ಎಂದು ಪ್ರಶ್ನಿಸಿದರು.
ನಮ್ಮ ವಿರುದ್ದ ದಾಖಲಾದ ದೂರಿನ ದಿನ ಫ್ರೀಡಂ ಪಾರ್ಕ್ ನಲ್ಲಿ 10 ಸಾವಿರ ಜನರನ್ನು ಸೇರಿ ಪ್ರತಿಭಟನೆ ಮಾಡಿದ್ದರು ಆದರೆ ವಿಪತ್ತು ನಿರ್ವಹಣೆ ಕಾಯ್ದೆ ಅಡಿಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೊದಲ ಆರೋಪಿ ನಾನಾಗಿದ್ದು, ಉಳಿದಂತೆ ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಮಂಜುನಾಥ್, ಶಫಿವುಲ್ಲಾ ಹಾಗೂ ಬಸನಗೌಡ ಬಾದರ್ಲಿ ಅವರ ಹೆಸರನ್ನು ಸೇರಿಸಲಾಗಿದೆ ಎಂದು ವಿವರಿಸಿದರು.
ಪ್ರತಿಭಟನೆಯಲ್ಲಿ 10 ಸಾವಿರ ಜನ ಸೇರಿದ್ದರೂ ಕೇವಲ ನಮ್ಮ ಮೇಲೆ ಉದ್ದೇಶ ಪೂರ್ವಕವಾಗಿ ಪ್ರಕರಣ ದಾಖಲಿಸಿದ್ದಾರೆ. ನಾವು ಕಾನೂನು ಗೌರವಿಸಿ ಜಾಮೀನು ಪಡೆದು ಬಂದಿದ್ದೇವೆ. ಅದು ಬೇರೆ ವಿಚಾರ. ಆದರೆ ಪ್ರತಿವೊಂದು ಪ್ರಕರಣದಲ್ಲೂ ನಮ್ಮ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ ಈ ಮೂಲಕ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆದಿದೆ ಎಂದು ಆಪಾದಿಸಿದರು.
ನಾವು ಹೋರಾಟ ಮಾಡಿದ ಪರಿಣಾಮದಿಂದ ಪ್ರಧಾನಮಂತ್ರಿಗಳು ಕರಾಳ ಕೃಷಿ ಕಾಯ್ದೆಗಳನ್ನು ಹಿಂಪಡೆದರು. ರಾಜ್ಯದಲ್ಲಿ ಇನ್ನೂ ಕಾಯ್ದೆ ಹಿಂಪಡೆದಿಲ್ಲ. ರೈತರ ಪರ ಧ್ವನಿ ಎತ್ತುವ ಕಾಂಗ್ರೆಸ್ ಧ್ವನಿ ಅಡಗಿಸುವ ಪ್ರಯತ್ನ ಇದಾಗಿದೆ ಎಂದು ದೂರಿದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
