Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕ್ಸಲ್ ಮುಕ್ತವಾಗಲಿದೆ ಕರ್ನಾಟಕ
    ರಾಜ್ಯ

    ನಕ್ಸಲ್ ಮುಕ್ತವಾಗಲಿದೆ ಕರ್ನಾಟಕ

    vartha chakraBy vartha chakraಜನವರಿ 7, 202527 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.7-
    ಕರ್ನಾಟಕ ಸೇರಿದಂತೆ ಕೇರಳ, ಆಂಧ್ರಕ್ಕೆ ಬೇಕಾಗಿರುವ ಮೋಸ್ಟ್​ ವಾಂಟೆಡ್​​ ಎನಿಸಿರುವ ಆರು​ ಮಂದಿ ನಕ್ಸಲರು ಜಿಲ್ಲಾಡಳಿತ ಮುಂದೆ ನಾಳೆ  ಶರಣಾಗಲು ನಿರ್ಧರಿಸಿದ್ದಾರೆ.
    ಇದರಿಂದ ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ದಶಕಗಳಿಂದ ಕಾಡುತ್ತಿದ್ದ ನಕ್ಸಲ್​ವಾದ ಅಂತಿಮ ಹಂತಕ್ಕೆ ಬಂದು ನಿಂತಿದೆ. ಸರ್ಕಾರದ ಸೂಚನೆಯಂತೆ ಶರಣಾಗತಿಗೆ ಆರು ಮಂದಿ ನಕ್ಸಲರು ನಿರ್ಧರಿಸಿ ನಾಳೆ ಚಿಕ್ಕಮಗಳೂರಿನಲ್ಲಿ ಶರಣಾಗುವ ಸಾಧ್ಯತೆ ಇದೆ.
    ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ನಕ್ಸಲ್​ ನಾಯಕಿ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ.ಅಲಿಯಾಸ್ ರಮೇಶ ಮತ್ತು ಆಂದ್ರಪ್ರದೇಶದ ಮಾರೆಪ್ಪ ಅರೋಲಿ ಸೇರಿದಂತೆ ಆರು ಮಂದಿ ನಕ್ಸಲ್​ರು ಶರಣಾಗಲಿದ್ದಾರೆ.
    ಶರಣಾಗುವ ಮುನ್ನ ನಕ್ಸಲರು ಸರ್ಕಾರಕ್ಕೆ ಅಂದರೆ ಶಾಂತಿ ನಾಗರಿಕರ ವೇದಿಕೆ ಮತ್ತು ನಕ್ಸಲ್​ ಪುನರ್ವಸತಿ ಸಮಿತಿಗೆ ಬರೆದಿರುವ ಪತ್ರದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ, ತಮ್ಮ ಮೇಲಿನ ಸುಳ್ಳು ಕೇಸ್​ಗಳನ್ನು ಖುಲಾಸೆಗೊಳಿಸುವುದು ಮತ್ತು ವಿಕ್ರಂಗೌಡ ಎನ್​​ಕೌಂಟರ್​​ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡುವಂತೆ ಒತ್ತಾಯಿಸಿದ್ದಾರೆ.
    ನಕ್ಸಲರ ಪತ್ರದ ವಿವರ:
    ಆರು ಜನರಾದ ನಾವು ಸಂಪೂರ್ಣ ಸಮ್ಮತಿ ಮತ್ತು ಏಕ ಅಭಿಪ್ರಾಯದ ಮೇರೆಗೆ ಈ ಪತ್ರವನ್ನು ತಮಗೂ ಆ ಮೂಲಕ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನ ಸರ್ಕಾರಗಳಗೆ ಬರೆಯುತ್ತಿದ್ದೇವೆ.
    ದೇಶದ ಇಂದಿನ ಸಂದರ್ಭ, ಚಳುವಳಿಗಳು ಪಡೆಯುತ್ತಿರುವ ರೂಪಾಂತರ, ಸಾಮಾಜಿಕ ಅಗತ್ಯ ಎಲವನ್ನು ಗಮನದಲ್ಲಿ ಇಟ್ಟುಕೊಂಡು ಸಶಸ್ತ್ರ ಹೋರಾಟದ ಮಾರ್ಗವನ್ನು ಬದಲಾಯಿಸಿ ಪ್ರಜಾತಾಂತ್ರಿಕ ಮುಖ್ಯವಾಹಿನಿಗೆ ಮರಳುವುದು ಒಳ್ಳೆಯದು ಮತ್ತು ಅದಕ್ಕೆ ಸಾಧ್ಯತೆ ಇದೆ ಎಂದು ಮನವರಿಕೆಯಾಗಿದೆ.
    ನಾವು ಯಾವುದೇ ಒತ್ತಡವಿಲ್ಲದೆ. ಸ್ವ-ಇಚ್ಛೆಯಿಂದ ಮುಖ್ಯವಾಹಿನಿಗೆ ಬರಲು ಬಯಸುತ್ತಿದ್ದೇವೆ. ಆದರೆ ಈ ಸಂದರ್ಭದಲ್ಲಿ ಕೆಲವು ಖಚಿತ ಸ್ಪಷ್ಠೀಕರಣವನ್ನು ಸರ್ಕಾರ ಮತ್ತು ಸಂಬಂಧಿತ ಸಮಿತಿಯಿಂದ ಬಯಸುತ್ತಿದ್ದೇವೆ” ಎಂದು ಪತ್ರದಲ್ಲಿ ಬರೆದಿದ್ದಾರೆ.
    ನಕ್ಸಲ್​ರ ಸ್ಪಷ್ಠೀಕರಣ:
    ನಾವು ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆ ಘನತೆಯುತವಾಗಿ ನಡೆಯಬೇಕು. ನಮ್ಮ ಆತ್ಮಗೌರವ ಹಾಗೂ ಸ್ವಾಭಿಮಾನಕ್ಕೆ ದಕ್ಕೆ ಆಗದ ಯಾವುದೇ ರೀತಿಯ ಒತ್ತಡ ಹೇರಬಾರದು.
    ನಾವು ಹೋರಾಟದ ಮಾರ್ಗವನ್ನು ಬದಲಾಯಿಸಿದ್ದೇವೆ. ಆದರೆ, ಜನಪರ ಹೋರಾಟವನ್ನು ಕೈ ಬಿಡುತ್ತಿಲ್ಲ. ಹೀಗಾಗಿ ಪ್ರಜಾತಾಂತ್ರಿಕ ಚಳುವಳಿಗಳಲ್ಲಿ, ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಯಾವುದೇ ರೀತಿಯ ತಡೆ ಒಡ್ಡಬಾರದು. ನಮ್ಮ ಬದುಕನ್ನು ಜನತೆಗೆ ಮುಡುಪಿಟ್ಟಿದ್ದೇವೆ. ಜನ ಹಿತಕ್ಕಾಗಿಯೇ ಬದುಕಲು ಬಯಸುತ್ತೇವೆ.
    ನಾವು ಇಲ್ಲಿಂದ ಹೊರ ಬಂದು ಜೈಲುಗಳಲ್ಲಿ ಕೊಳೆಯುವ ಮನಸ್ಥಿತಿ ಎದುರಾಗಬಾರದು. ನಮ್ಮ ಮೇಲೆ ಹಾಕಿರುವ ಹೆಚ್ಚಿನ ಪಾಲು ಕೇಸುಗಳು ಯಾವುದೇ ಅನುಮಾನವಿಲ್ಲದೆ ಸುಳ್ಳು ಕೇಸುಗಳಾಗಿವೆ. ಜಾವು ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿಲ್ಲದ ಪ್ರಕರಣಗಳಲ್ಲಿ ನಮ್ಮ ಹೆಸರುಗಳನ್ನು ಸೇರಿಸಲಾಗಿದೆ. ಈ ಕೇಸುಗಳ ಜಲಾದಿಂದ ನಮಗೆ ಮುಕ್ತಿ ಸಿಗಬೇಕು.
    ಮುಖ್ಯವಾಹಿನಿಗೆ ಬಂದ ನಂತರ ಬೇಗನೆ ಜಾಮೀನಿನ ಮೇಲೆ ಹೊರ ಬರಲು ಸಹಕರಿಸಬೇಕು
    ಎಲ್ಲ ಮೊಕದ್ದಮೆಗಳನ್ನು ಒಂದೇ ನ್ಯಾಯಾಲಯದ ಅಡಿ ತಂದು ತ್ವರಿತ ವಿಚಾರಣೆ ನಡೆಯುವಂತೆ ಮಾಡಬೇಕು.
    ಕೇಸುಗಳನ್ನು ನಡೆಸಲು ಕಾನೂನು ಹಾಗೂ ಆರ್ಥಿಕ ನೆರವು ಒದಗಿಸುವ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು.
    ಈಗಾಗಲೇ ಮುಖ್ಯವಾಹಿನಿಗೆ ಬಂದ ಹಲವರ ಬದುಕು ಅತಂತ್ರವಾಗಿದೆ. ಅವರ ಕೇಸುಗಳ ಇತ್ಯರ್ಥಕ್ಕೆ ಹಾಗೂ ಬದುಕಿನ ಭದ್ರತೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು.
    ಬೇರೆ ಬೇರೆ ಜೈಲುಗಳಲ್ಲಿರುವ ಸಂಗಾತಿಗಳಿಗೂ (ಅವರು ಬಂಧನಕ್ಕೊಳಗಾಗಿದ್ದರೂ ಸಹ) ಈ ಪ್ಯಾಕೇಜ್ ಅನ್ವಯ ಆಗುವಂತೆ ಮಾಡಿ ಅವರ ಬಿಡುಗಡೆಗೆ ಸಹಕರಿಸಬೇಕು.
    ಹೊರ ಬಂದ ನಂತರ ನಮ್ಮ ಜೀವನಕ್ಕೆ ದಾರಿ ಏನು ಎಂಬ ಸ್ಪಷ್ಟತೆ ಬೇಕು.
    ಡಿಸಿಎಂ ವಿಕ್ರಮಗೌಡ ಅವರ ಎನ್ಕೌಂಟರ್ ಹತ್ಯೆಯ ಕುರಿತು ನ್ಯಾಯಾಂಗ ತನಿಖೆಗೆ ಆದೇಶ ಮಾಡಬೇಕು” ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.
    ನ್ಯಾಯಾಂಗ ತನಿಖೆಗೆ ಭರವಸೆ:
    ನಕ್ಸಲರ ಬೇಡಿಕೆಯಂತೆ ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂಗೌಡ ಎನ್ಕೌಂಟರ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಪೀತೆಬೈಲ್ ಅರಣ್ಯದಲ್ಲಿ ನಕ್ಸಲ್ ವಿಕ್ರಂಗೌಡ ಎನ್ಕೌಂಟರ್ ಆಗಿತ್ತು

    ಉಡುಪಿ ಕರ್ನಾಟಕ ಕಾನೂನು ನ್ಯಾಯ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಂಚಕಿ ಐಶ್ವರ್ಯಾ ಗೌಡನಿಗೂ ವಿನಯ್ ಕುಲಕರ್ಣಿ ಗೂ ಏನು ನಂಟು
    Next Article ಔತಣ ಕೂಟ- ಪರಮೇಶ್ವರ್ ಸರದಿ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://timpapa.com/ ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • promopmpa ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • https://arah138.net/kvartiry-na-sutki-v-vitebske-snjat-nedorogo/ ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe