ಬೆಂಗಳೂರು, ಆ.23-
ತಮ್ಮ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರನ್ನು ಹತ್ಯೆ ಮಾಡಿದ ನಟ ದರ್ಶನ್ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು ಸದ್ಯದಲ್ಲೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಅತ್ಯಂತ ದಕ್ಷತೆಯಿಂದ ಪ್ರಕರಣವನ್ನು ಭೇದಿಸಿ ತನಿಖೆ ಪೂರ್ಣಗೊಳಿಸಿದ್ದಾರೆ. ಕೆಲವು ಸಾಕ್ಷಿಗಳ ಸಂಬಂಧ ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಯ ವರದಿಗಳು ಕೂಡ ಕಾಮಾಕ್ಷಿಪಾಳ್ಯ ಪೊಲೀಸರ ಕೈ ಸೇರಿವೆ ಇದನ್ನು ಕ್ರೂಢೀಕರಿಸಿ ಆರೋಪ ಪಟ್ಟಿ ಸಿದ್ಧಪಡಿಸುತ್ತಿದ್ದಾರೆ ಎಂದು ವಿವರಿಸಿದರು.
ಕೆಲವು ಸಾಕ್ಷಿಗಳ ಕುರಿತಂತೆ ಹೈದರಾಬಾದ್ ನಿಂದ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು ಬರುವುದು ಬಾಕಿ ಇದೆ ಅದು ಬಂದ ಕೂಡಲೇ ತನಿಖೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ವಿಚಾರಣಾಧೀನ ಖೈದಿಯಾಗಿರುವ ನಟ ದರ್ಶನ್ ಅವರನ್ನು ಹಾಸ್ಯ ನಟ ಚಿಕ್ಕಣ್ಣ ಅವರು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಭೇಟಿ ಮಾಡಿದ್ದಾರೆ ಈ ಬಗ್ಗೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರೇಣುಕಾ ಸ್ವಾಮಿ ಹತ್ಯೆ ನಡೆಯುವ ಮುನ್ನ ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ನಲ್ಲಿ ನಟ ದರ್ಶನ್ ಪಾರ್ಟಿ ಮಾಡಿದ್ದರು ಆ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಕೂಡ ಭಾಗಿಯಾಗಿದ್ದರು ಈ ಕುರಿತಂತೆ ಪೊಲೀಸರು ಅವರಿಂದ ಮಾಹಿತಿ ಸಂಗ್ರಹಿಸಿದ್ದು ಅದನ್ನು ಸಾಕ್ಷಿಯಾಗಿ ಪರಿಗಣಿಸಲಾಗಿದೆ ಈಗ ಅವರು ಆರೋಪಿಯನ್ನು ಭೇಟಿ ಮಾಡಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.


1 ಟಿಪ್ಪಣಿ
Нужен трафик и лиды? сайт студии avigroup SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.