ಮುಂಬೈ,ಜ.16-
ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮನೆಗೆ ಕಳ್ಳತನ ಮಾಡಲು ನುಗ್ಗಿದ ಕಳ್ಳರ ತಂಡದಲ್ಲಿದ್ದ ದುಷ್ಕರ್ಮಿಯೊಬ್ಬ ಅದಕ್ಕೆ ಪ್ರತಿರೋಧ ತೋರಿದ ನಟ ಸೈಫ್ ಅಲಿ ಖಾನ್ ಮೇಲೆ ಕ ಚಾಕುವಿನಿಂದ ದಾಳಿ ಮಾಡಿ ಪರಾರಿಯಾಗಿದ್ದಾನೆ
ಏಕಾಏಕಿ ಕಳ್ಳ ಮಾಡಿದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
ಮುಂಬೈನ ಬಾಂದ್ರಾದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ದುಷ್ಕರ್ಮಿಯೊಬ್ಬ ಕಳ್ಳತನಕ್ಕೆಂದು ಬಂದಿದ್ದಾನೆ.ಆತ ಕಳ್ಳತನ ಮಾಡುವ ವೇಳೆ ಉಂಟಾದ ಸದ್ದಿನಿಂದ ಎಚ್ಚರಗೊಂಡ ಸೈಫ್ ಅಲಿ ಖಾನ್ ಆತನ ಬಳಿ ಹೋಗಿದ್ದಾರೆ ತಕ್ಷಣವೇ ಆತ ಚಾಕುವಿನಿಂದು ಇರಿದು ಪರಾರಿಯಾಗಿದ್ದಾನೆ.
ಶ್ರೀಮಂತ ನಟ ಎಂಬ ಕಾರಣಕ್ಕೆ ಕಳ್ಳರ ಗುಂಪೊಂದು ಅವರ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದೆ.ಈ ವೇಳೆ ಸೈಫ್ ಅಲಿ ಖಾನ್ ಅವರು ತಡೆಯಲು ಪ್ರಯತ್ನಿಸಿದ್ದಾರೆ. ಆಗ ಅವರಿಗೆ ಗಾಯ ಆಗಿದೆ. ಅವರನ್ನು ಸದ್ಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಕಳ್ಳರ ಬಂಧನಕ್ಕೆ ತೀವ್ರ ಶೋಧ ನಡೆಯುತ್ತಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ
ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ವಿಶೇಷ ಪೊಲೀಸರ ತಂಡ ರಚನೆ ಆಗಿದೆ. ಮನೆ ಹಾಗೂ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಳ್ಳರು 2-3 ಬಾರಿ ಹಲ್ಲೆ ಮಾಡಿದ್ದಾರೆ. ನಾವು ಇದನ್ನು ತನಿಖೆ ನಡೆಸುತ್ತಿದ್ದೇವೆ. ಮುಂಬೈ ಕ್ರೈಮ್ ಬ್ರ್ಯಾಂಚ್ ಕೂಡ ತನಿಖೆ ನಡೆಸುತ್ತಿದೆ. ಮುಂಜಾನೆ 3 ಗಂಟೆಗೆ ಸೈಫ್ ಅವರನ್ನು ಲೀವಾತಿ ಆಸ್ಪತ್ರೆಗೆ ಕರೆತರಲಾಗಿದೆ. ಅವರಿಗೆ ಆರು ಗಾಯಗಳಾಗಿದ್ದು, ಎರಡು ಕಡೆ ತುಂಬಾನೇ ಗಂಭೀರ ಗಾಯವಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.
ಬೆನ್ನಿನ ಭಾಗದಲ್ಲಿ ಕಳ್ಳರು ಇರಿದ ಚಾಕು ತುಂಬಾನೇ ದೊಡ್ಡ ಗಾಯವನ್ನೇ ಮಾಡಿದೆ ಎನ್ನಲಾಗಿದೆ. ಬೆನ್ನಿನ ಮೂಳೆಗೆ ತೊಂದರೆ ಆಗಿದೆಯೇ ಎನ್ನುವ ಬಗ್ಗೆ ಪರೀಕ್ಷೆ ನಡೆಯುತ್ತಿದೆ. ಸದ್ಯ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇದೆ ಎನ್ನಲಾಗಿದೆ.
Previous Articleರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ಎಚ್ಚರಿಕೆ
Next Article ಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು

