ಬೆಂಗಳೂರು,ಜು.3-
ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ನನಗಿದೆ ಎಂದಾದರೂ ಒಂದು ದಿನ ಅವರು ಖಂಡಿತ ಈ ಹುದ್ದೆ ಅಲಂಕರಿಸಲಿದ್ದಾರೆ ಎಂದು ಮಾಜಿ ಸಂಸದ ಹಾಗೂ ಅವರ ಸೋದರ ಡಿಕೆ ಸುರೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ನಾಯಕರಾಗಿ ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಿರುವ ಅವರು ಈ ಹೇಳಿಕೆ ನೀಡುವುದರಲ್ಲಿ ವಿಶೇಷ ಏನು ಇಲ್ಲ ಎಂದು ತಿಳಿಸಿದರು.
ಜನರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ. ನಾವು ಜನರ ಹಿತವನ್ನು ಕಾಪಾಡಬೇಕು. ಡಿ.ಕೆ ಶಿವಕುಮಾರ್, ಮತ್ತು ಸಿದ್ದರಾಮಯ್ಯ ಚೆನ್ನಾಗಿದ್ದಾರೆ. ಇವತ್ತೂ ಚೆನ್ನಾಗಿದ್ದಾರೆ, ನಾಳೆಯೂ ಚೆನ್ನಾಗಿರುತ್ತಾರೆ. ನಾನು ಮುಖ್ಯಮಂತ್ರಿ ಆಗಬೇಕು ಶಾಸಕ ಆಗಬೇಕು ಎನ್ನುವುದು ನಮ್ಮ ಹಣೆಯಲ್ಲಿ ಬರೆದಿರಬೇಕು ಎಂದರು.
ಪಕ್ಷ ನಿಷ್ಠೆ ಮತ್ತು ಸಂಘಟನೆಗೆ ಡಿಕೆ ಶಿವಕುಮಾರ್ ಅತ್ಯಂತ ಹೆಸರುವಾಸಿ ಅವರ ಈ ಬದ್ಧತೆಯನ್ನು ಯಾರು ಕೂಡ ಪ್ರಶ್ನಿಸಲು ಸಾಧ್ಯವಿಲ್ಲ ಪಕ್ಷದ ಪರವಾಗಿರುವ ಅವರ ಅಚಲವಾದ ನಿಷ್ಠೆ ಒಂದಲ್ಲ ಒಂದು ದಿನ ಉನ್ನತ ಹುದ್ದೆಗೇರಲು ಸಹಾಯ ಮಾಡಲಿದೆ ಎಂಬ ಆಶಾವಾದ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಹುದ್ದೆಯ ವಿಚಾರದಲ್ಲಿ ಡಿಕೆ ಶಿವಕುಮಾರ್ ಅವರದ್ದು ಅಸಹಾಯಕತೆ ಅಲ್ಲ. ಪಕ್ಷಕ್ಕೆ ಗೌರವ ಕೊಡುವುದು ನಾಯಕತ್ವಕ್ಕೆ ಮಾನ್ಯತೆ ನೀಡುವುದು ಅವರು ರೂಢಿಸಿಕೊಂಡಿರುವ ಕೆಲಸ ಹೀಗಾಗಿ ಅವರು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಪಕ್ಷದ ಅಧ್ಯಕ್ಷರಾಗಿ ಹೈಕಮಾಂಡ್ ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸಿದ್ದಾರೆ ಈಗಲೂ ಕೂಡ ಅಷ್ಟೇ ನಿಷ್ಠೆಯಿಂದ ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಹೀಗಾಗಿ ಹೈಕಮಾಂಡ್ ಇವರ ನಿಷ್ಠೆ ಮತ್ತು ಬದ್ಧತೆಯನ್ನು ಗುರುತಿಸಿ ಒಂದಲ್ಲ ಒಂದು ದಿನ ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಅವಕಾಶ ನೀಡುತ್ತದೆ ಅದಕ್ಕಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದರು.
Previous Articleಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !
Next Article ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.