ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವ ಯುವತಿಯರ ವಿಡಿಯೋ ರೆಕಾರ್ಡ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆದಿದ್ದ ಕಾಮುಕನನ್ನು ನಗರ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಮೆಟ್ರೋ ಕ್ಲಿಕ್ಸ್’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮೆಟ್ರೋದಲ್ಲಿನ ಮಹಿಳೆಯರ ಆಕ್ಷೇಪಾರ್ಹ ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದ. 5 ಸಾವಿರಕ್ಕೂ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಖಾತೆಯಲ್ಲಿ ಸುಮಾರು 13ಕ್ಕೂ ಹೆಚ್ಚು ವಿಡಿಯೋಗಳನ್ನು ಈತ ಹಂಚಿಕೊಂಡಿದ್ದ.
ಮೆಟ್ರೋ ರೈಲಿನ ಒಳಗೆ, ನಿಲ್ದಾಣಗಳಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ರೆಕಾರ್ಡ್ ಮಾಡಿ, ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದನು.
ಈ ಖಾತೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ವಿಡಿಯೋಗಳು ಡಿಲೀಟ್ ಆಗಿದ್ದವು. ನಂತರ ಇನ್‌ಸ್ಟಾಗ್ರಾಮ್ ಖಾತೆಯೇ ಡಿಲೀಟ್ ಆಗಿತ್ತು.ಇನ್‌ಸ್ಟಾಗ್ರಾಮ್ ಪೇಜ್ ವಿರುದ್ಧ ಬನಶಂಕರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದ ಪೊಲೀಸರು, ಐಟಿ ಕಾಯಿದೆ 2008ರ ಸೆಕ್ಷನ್ 67, ಬಿಎನ್‌ಎಸ್ 78(2)ರಡಿ ಕೇಸು ದಾಖಲಿಸಿಕೊಂಡಿದ್ದರು.
ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ತಮ್ಮ ಫೋಟೋ ತೆಗೆಯುತ್ತಿರುವ ಬಗ್ಗೆ ಯಾರಿಗೂ ತಿಳಿದಿರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಫೋಟೋಗಳನ್ನು ಅವರ ಅನುಮತಿ ಇಲ್ಲದೆ ತೆಗೆಯುವುದು ಮತ್ತು ಹಂಚುವುದು ಕಾನೂನು ಪ್ರಕಾರ ಅಪರಾಧ. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.ಅಲ್ಲದೆ ಸಾರ್ವಜನಿಕರು ಇಂತಹ ಕೃತ್ಯಗಳನ್ನು ಗಮನಿಸಿದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆಯೂ ಡಿಸಿಪಿ ಲೋಕೇಶ್ ಬಿ ಜಗಲಾಸರ್ ಮನವಿ ಮಾಡಿದ್ದಾರೆ.
Previous Articleಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್
Next Article ಯದುವೀರ್ ಒಡೆಯರ್ ಗೆ ಕೋಪ ಬಂದಿದೆ.
