ಚಂಡೀಗಢ: ರೋಡ್ ರೇಜ್ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಪಟಿಯಾಲ ಕೋರ್ಟ್‌ಗೆ ಶರಣಾಗಿದ್ದಾರೆ.
ಶುಕ್ರವಾರ ಸಂಜೆ ಪಟಿಯಾಲ ನ್ಯಾಯಾಲಯಕ್ಕೆ ಆಗಮಿಸಿದ ಸಿಧು ಮುಖ್ಯ ನ್ಯಾಯಾಧೀಶರ ಎದುರು ಶರಣಾದರು. ವೈದ್ಯಕೀಯ ಪರೀಕ್ಷೆ ಮತ್ತು ಇತರ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಸಿಧು ಅವರ ಮಾಧ್ಯಮ ಸಲಹೆಗಾರ ಸುರೇಂದರ್ ದಲ್ಲಾ ತಿಳಿಸಿದ್ದಾರೆ.
34 ವರ್ಷದ ಹಿಂದೆ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿತ್ತು.