ಬೆಂಗಳೂರು,ಆ.19-
ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರದ ತಪ್ಪು ಮಾಡಿಲ್ಲ ಈಗ ಬಂದಿರುವ ಆರೋಪದ ಬಗ್ಗೆ ಕಾನೂನು ಹೋರಾಟ ಮಾಡುತ್ತಿದ್ದು ಇದರಲ್ಲಿ ಜಯಶೀಲನಾಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಾಗಿದೆ. ನಾನು ಯಾವುದೇ ತಪ್ಪು ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಜನರಿಗೆ ಗೊತ್ತಿದೆ. ರಾಜಕೀಯ ಕಾರಣಕ್ಕಾಗಿ ಬಿಜೆಪಿ-ಜೆಡಿಎಸ್‌ನವರು ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆಪಾದಿಸಿದರು
ಸುಳ್ಳು ಪ್ರಕರಣವನ್ನು ಇಟ್ಟುಕೊಂಡು ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಪ್ರಜ್ಞೆ ಸ್ಪಷ್ಟವಾಗಿದೆ. 1984 ರಿಂದ ಈವರೆಗೆ 40 ವರ್ಷಗಳಲ್ಲಿ ಸಚಿವನಾಗಿ, ಉಪಮುಖ್ಯಮಂತ್ರಿ ಯಾಗಿ, ಮುಖ್ಯಮಂತ್ರಿಯಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಜನರ ಸೇವೆ ಮಾಡುವುದನ್ನು ಹೊರತುಪಡಿಸಿ ಬೇರೆ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದರು.
ತಾವು ಬಡವರ ಪರವಾಗಿರು ವುದರಿಂದ ವಿರೋಧಪಕ್ಷ ಗಳಿಗೆ ತಮನ್ನುಕಂಡರೆ ಭಯ. ಅದಕ್ಕಾಗಿ ನನ್ನನ್ನು ರಾಜಕೀಯವಾಗಿ ಮುಗಿಸಿದರೆ ಇಡೀ ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಮುಗಿಸಬಹುದು ಎಂಬ ಭ್ರಮೆ ವಿರೋಧಪಕ್ಷಗಳಲ್ಲಿವೆ ಎಂದು ಹೇಳಿದರು.
ಬಿಜೆಪಿ-ಜೆಡಿಎಸ್‌ನವರು ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ರಾಜಕೀಯವಾಗಿ ಉತ್ತರ ನೀಡುತ್ತೇವೆ. ಜೊತೆಗೆ ಕಾನೂನು ಸಮರವನ್ನು ಮುಂದುವರೆಸುತ್ತೇವೆ ಎಂದರು.
ಗುರುವಾರ ಕಾಂಗ್ರೆಸ್ ಶಾಸಕನ ಪಕ್ಷದ ಸಭೆ ಕರೆಯಲಾಗಿದೆ ಅಲ್ಲಿ ಹಲವಾರು ವಿಷಯಗಳು ಚರ್ಚೆಗೆ ಬರಲಿವೆ ಅದೇ ರೀತಿ ಕೆಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಬಂದ ವೇಳೆ ಅವರನ್ನು ಭೇಟಿ ಮಾಡಿ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಿದ್ದೇನೆ ಈ ತಿಂಗಳ 23 ರಂದು ದೆಹಲಿಗೆ ಬರಬಹುದಾಗಿ ತಿಳಿಸಿದ್ದು ದೆಹಲಿಗೆ ಹೋಗುತ್ತಿದ್ದೇನೆ ಇದರಲ್ಲಿ ವಿಶೇಷವೇನು ಇಲ್ಲ ಎಂದು ಸ್ಪಷ್ಟಪಡಿಸಲು